ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಲೌಡ್‌ನೈನ್‌ಗೆ ಸೇವಾ ಪ್ರಶಸ್ತಿ ಪ್ರದಾನ

Last Updated 2 ನವೆಂಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕ್ಲೌಡ್‌ನೈನ್ ಆಸ್ಪತ್ರೆಗೆ ಬ್ರ್ಯಾಂಡ್ಸ್ ಅಕಾಡೆಮಿಯ 2011ನೇ ಸಾಲಿನ `ಅತ್ಯುತ್ತಮ ಸೇವಾ ಪ್ರಶಸ್ತಿ~ ಲಭಿಸಿದೆ. ನಗರದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಸಂಸದ ಶಶಿ ತರೂರ್ ಅವರು, ಕ್ಲೌಡ್‌ನೈನ್ ಆಸ್ಪತ್ರೆಗಳ ವ್ಯವಸ್ಥಾಪಕ ನಿರ್ದೇಶಕ ಡಾ. ಕಿಶೋರ್‌ಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಿಶೋರ್‌ಕುಮಾರ್, `ಆರೋಗ್ಯ ಕ್ಷೇತ್ರದಲ್ಲಿ ಪ್ರತಿಷ್ಠಿತವೆನಿಸಿರುವ ಬ್ರ್ಯಾಂಡ್ಸ್ ಅಕಾಡೆಮಿಯ ಪ್ರಶಸ್ತಿ ಪಡೆದಿರುವುದಕ್ಕೆ ಸಂತಸವಾಗುತ್ತಿದೆ. ಚಿಕಿತ್ಸಾ ವಿಧಾನದ ಗುಣಮಟ್ಟ, ಚಿಕಿತ್ಸಾ ವೆಚ್ಚ, ಸಾರ್ವಜನಿಕರ ಅಭಿಪ್ರಾಯ, ಗ್ರಾಹಕರ ತೃಪ್ತಿ, ಅತ್ಯಾಧುನಿಕ ಸೌಲಭ್ಯಗಳನ್ನು ಪರಿಣಿಸುವುದರಿಂದ ಈ ಪ್ರಶಸ್ತಿ ಪಡೆದಿರುವುದಕ್ಕೆ ಹೆಮ್ಮೆ ಎನಿಸುತ್ತಿದೆ~ ಎಂದರು.

`2007ರಲ್ಲಿ ಆರಂಭವಾದ ಆಸ್ಪತ್ರೆಯಲ್ಲಿ ಈವರೆಗೆ 7,500 ಶಿಶುಗಳ ಜನನವಾಗಿದೆ. ಅಸಾಧಾರಣವಾದ ಹಾಗೂ ಕ್ಲಿಷ್ಟಕರ ಹೆರಿಗೆಯನ್ನು ಯಶಸ್ವಿಯಾಗಿ ಮಾಡಲಾಗಿದೆ ಗುಣಮಟ್ಟದ ಚಿಕಿತ್ಸೆಗೆ ಆದ್ಯತೆ ನೀಡಲಾಗಿದೆ. ತಂತಜ್ಞಾನ ಬಳಸಿ ಇನ್ನಷ್ಟು ಉತ್ತಮ ಸೇವೆ ನೀಡಲಾಗುವುದು~ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT