ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ವಟ್ರೋಚಿ ಪ್ರಕರಣ: ತೀರ್ಪು ಮಾ. 4ಕ್ಕೆ

Last Updated 21 ಫೆಬ್ರುವರಿ 2011, 17:00 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಬೊಫೋರ್ಸ್ ಫಿರಂಗಿ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಇಟಲಿಯ ಉದ್ಯಮಿ ಒಟ್ಟಾವಿಯೊ ಕ್ವಟ್ರೋಚಿ ಮೇಲಿನ ಆರೋಪದ ಬಗ್ಗೆ ವಿಚಾರಣೆ ನಡೆಸಿದ ದೆಹಲಿ ಮೆಟ್ರೊಪಾಲಿಟನ್ ನ್ಯಾಯಾಲಯ ತೀರ್ಪು ಪ್ರಕಟಣೆಯನ್ನು ಮಾರ್ಚ್ 4 ಕ್ಕೆ ಮುಂದೂಡಿದೆ.

ಕ್ವಟ್ರೋಚಿ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ಹಿಂಪಡೆಯಲು ತೀರ್ಮಾನಿಸಿದ್ದ ಸಿಬಿಐ ಅಧಿಕಾರಿಗಳು, ಪ್ರಕರಣದ  ವಿಚಾರಣೆ ಕೈಬಿಡುವಂತೆ ನ್ಯಾಯಾಯಲಕ್ಕೆ ಅರ್ಜಿ ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ  ಚೀಫ್ ಮೆಟ್ರೊಪಾಲಿಟನ್ ನ್ಯಾಯಾಧೀಶ  ವಿನೋದ್ ಯಾದವ್ ತೀರ್ಪನ್ನು ಕಾಯ್ದಿರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT