ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷೇತ್ರ ಅಭಿವೃದ್ಧಿಗೆ ರೂ 1 ಕೋಟಿ

Last Updated 24 ಜನವರಿ 2011, 10:25 IST
ಅಕ್ಷರ ಗಾತ್ರ

ಚನ್ನಗಿರಿ: ಶಿವಾಜಿ ಮಹಾರಾಜರು ಅಪ್ರತಿಮ ದೇಶಭಕ್ತರಾಗಿದ್ದರು. ಅವರ ತಂದೆ ಸಮಾಧಿ ಸ್ಥಳದಲ್ಲಿ ಪುಣ್ಯತಿಥಿ ಆಚರಿಸುತ್ತಿರುವುದು ಸಂತಸ ತಂದಿದೆ ಎಂದು ಶಿವಮೊಗ್ಗ ಆದಿಚಂಚನಗಿರಿ ಶಾಖಾ ಮಠದ ಪ್ರಸನ್ನನಾಥ ಸ್ವಾಮೀಜಿ ಹೇಳಿದರು.

ಭಾನುವಾರ ತಾಲ್ಲೂಕಿನ ಹೊದಿಗೆರೆ ಗ್ರಾಮದಲ್ಲಿ ನಡೆದ ಷಹಾಜಿ ರಾಜೇ ಭೋಂಸ್ಲೆ ಅವರ 347ನೇ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಈ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ್ಙ 1 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಈಗ ಪ್ರಥಮ ಕಂತಾಗಿ ರೂ 33 ಲಕ್ಷ ಅನುದಾನ ಬಿಡುಗಡೆಯಾಗಿದೆ. ಉಳಿದ ಅನುದಾನವನ್ನು ಬೇಗ ಬಿಡುಗಡೆ ಮಾಡಿದರೆ ಸಮುದಾಯ ಭವನದ ನಿರ್ಮಾಣ ಕಾರ್ಯಕ್ಕೆ ಸಹಾಯಕವಾಗುತ್ತದೆ.

ಸಮಾಜದ ಅಭಿವೃದ್ಧಿಗೆ ಸಮಾಜದ ಬಾಂಧವರು ಮೊದಲು ಸಂಘಟಿತರಾಗಬೇಕು. ನಾವೆಲ್ಲರೂ ಒಂದೇ ಭಾವನೆ  ಮೂಡಬೇಕು. ಇಂದು ಪ್ರಾಮಾಣಿಕತೆ ಕೊರತೆಯಿಂದ ದೇಶದ ಪ್ರಗತಿ ಸಾಧ್ಯವಾಗಿಲ್ಲ. ನಾವು ಇಂದು ಅರ್ಥ, ಕಾಮವನ್ನು ಮಾತ್ರ ಸ್ವೀಕರಿಸಿದ್ದೇವೆ ಎಂದು ವಿಷಾದ ವ್ಯಕ್ತಪಡಿಸಿದರು.

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಮಾಧಿ ಸ್ಥಳದ ಅಭಿವೃದ್ಧಿಗೆ ಈ ಸರ್ಕಾರ ್ಙ 1 ಕೋಟಿ ಬಿಡುಗಡೆ ಮಾಡಿ ್ಙ 33 ಲಕ್ಷವನ್ನು ಪ್ರಥಮ ಕಂತಾಗಿ ನೀಡಿದೆ ಎಂದರು.ಗೋಸಾಯಿ ಸಂಸ್ಥಾನ ಮಠದ ಸುರೇಶ್ವರಾನಂದ ಸ್ವಾಮೀಜಿ, ಐರಣಿ ಹೊಳೆ ಮಠದ ಬಸವರಾಜ ದೇಶಿಕೇಂದ್ರ ಸ್ವಾಮೀಜಿ, ಚಿತ್ರದುರ್ಗ ಕಬೀರಾನಂದ ಆಶ್ರಮದ ಶಿವಲಿಂಗಾನಂದ ಸ್ವಾಮೀಜಿ ಹಾಗೂ ಹುಬ್ಬಳ್ಳಿ ಸಿದ್ಧಾರೂಡ ಮಠದ ವಾಸುದೇವಾನಂದ ಸ್ವಾಮೀಜಿ ನೇತೃತ್ವ ವಹಿಸಿದ್ದರು.

ದಾವಣಗೆರೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಯಶವಂತರಾವ್ ಜಾಧವ್, ಭದ್ರಾವತಿ ಶಿವಾಜಿ ಸೇವಾ ಸಂಘದ ಅಧ್ಯಕ್ಷ ಶಿವಾಜಿರಾವ್ ಶಿಂಧೆ, ಮಾಜಿ ಶಾಸಕ ವಡ್ನಾಳ್ ರಾಜಣ್ಣ, ಮಾಜಿ ಜಿ.ಪಂ. ಸದಸ್ಯ ಹೊದಿಗೆರೆ ರಮೇಶ್, ಎಂ.ಎಸ್. ಜಾಧವ್, ಗ್ರಾ.ಪಂ. ಅಧ್ಯಕ್ಷ ಗಿರೀಶ್ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT