ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖರ್ಗೆ ವಿರುದ್ಧ ಸಿಎಂ ಟೀಕೆ ಸರಿಯಲ್ಲ

Last Updated 25 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಮೇಲೆ ಒತ್ತಡ ತಂದ ಕಾರಣ ಹೈದರಾಬಾದ್-ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ನೀಡಲು ಸಂವಿಧಾನದ 371ನೇ ವಿಧಿಗೆ ತರಬೇಕಿರುವ ತಿದ್ದುಪಡಿಯ ಕರಡು ಸಿದ್ಧವಾಗಿದೆ. ಆದರೆ ಮುಖ್ಯಮಂತ್ರಿಯವರು ಖರ್ಗೆಯವರ ಕುರಿತು ಅಸಮಾಧಾನ ವ್ಯಕ್ತಪಡಿಸಿರುವುದು ಸರಿಯಲ್ಲ ಎಂದು ಕೆಪಿಸಿಸಿ ವಕ್ತಾರ ಬಸವರಾಜ ರಾಯರೆಡ್ಡಿ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, `ಹೈದರಾಬಾದ್-ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂಬಂಧ ಖರ್ಗೆ ಮತ್ತು ಸಂಸದ ಧರ್ಮ ಸಿಂಗ್ ಅವರು ಕೇಂದ್ರದ ಮೇಲೆ ಸಾಕಷ್ಟು ಒತ್ತಡ ತರುತ್ತಿಲ್ಲ ಎಂದು ಮುಖ್ಯಮಂತ್ರಿಗಳು ಮಾಡಿರುವ ಆರೋಪ ಜವಾಬ್ದಾರಿಯುತ ಅಲ್ಲ~ ಎಂದು ಹೇಳಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT