ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖರ್ಚು- ವೆಚ್ಚ ನೀಡಲು ಆಗ್ರಹ

Last Updated 21 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಕೇಂದ್ರ ಸರ್ಕಾರದಿಂದ ರಾಜ್ಯದ ವಿವಿಧ ಇಲಾಖೆಗಳಿಗೆ ಬಿಡುಗಡೆಯಾದ 80 ಸಾವಿರ ಕೋಟಿ ರೂಪಾಯಿಗಳ ಖರ್ಚು-ವೆಚ್ಚದ ಸಂಪೂರ್ಣ ಮಾಹಿತಿಯನ್ನು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಜನತೆಯ ಮುಂದಿಡಬೇಕು~ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಒತ್ತಾಯಿಸಿದರು.

ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಚೇರಿ ಹಾಗೂ `ಕಾಂಗ್ರೆಸ್‌ನೊಂದಿಗೆ ಬನ್ನಿ- ಬದಲಾವಣೆ ತನ್ನಿ~ ಸಮಾವೇಶವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.

`ರಾಜ್ಯಕ್ಕೆ ಹಣ ನೀಡಲು ಸೋನಿಯಾ ಗಾಂಧಿ ಇಟಲಿಯಿಂದ ಹಣ ತಂದಿದ್ದಾರೆಯೇ~ ಎಂಬ ಬಿಜೆಪಿ ರಾಜ್ಯ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಅವರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಅವರು, `ಈ ರೀತಿಯ ಹೇಳಿಕೆ ನೀಡುವ ಯಾವುದೇ ನೈತಿಕ ಹಕ್ಕನ್ನು ಬಿಜೆಪಿ ಮುಖಂಡರು ಉಳಿಸಿಕೊಂಡಿಲ್ಲ~ ಎಂದು ತಿರುಗೇಟು ನೀಡಿದರು. 

 `ಜನರಲ್ಲಿ ಗೊಂದಲ ಉಂಟು ಮಾಡಿ ಉಪಮುಖ್ಯಮಂತ್ರಿ ಆರ್. ಅಶೋಕ ಅವರು ನಗರದ ಕೆರೆಗಳನ್ನು ಒತ್ತುವರಿ ಮಾಡುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಅವರಿಗೆ ಜನತೆ ತಕ್ಕ ಪಾಠ ಕಲಿಸಬೇಕು. ಭೂಗಳ್ಳರನ್ನು ಕಾಂಗ್ರೆಸ್ ಸುಮ್ಮನೆ ಬಿಡುವುದಿಲ್ಲ. ಚುನಾವಣೆಯಲ್ಲಿ ಮಟ್ಟ ಹಾಕುತ್ತೇವೆ~ ಎಂದು ಎಚ್ಚರಿಕೆ ನೀಡಿದರು.

`ನರ್ಮ್ ಯೋಜನೆಯಡಿ ಬಿಬಿಎಂಪಿಗೆ ಸಾವಿರಾರು ಕೋಟಿ ರೂಪಾಯಿಗಳನ್ನು ಅನುದಾನವಾಗಿ ನೀಡಲಾಗಿದೆ. ಆದರೆ, ಈವರೆಗೂ ನಗರದಲ್ಲಿ ಮೂಲಸೌಕರ್ಯದ ಕಾಮಗಾರಿ ಸೇರಿದಂತೆ ಯಾವುದನ್ನೂ ಸಮರ್ಪಕವಾಗಿ ನಡೆಸಿಲ್ಲ. ಕಸದ ಸಮಸ್ಯೆಯನ್ನು ಪರಿಹರಿಸಲು ಪಾಲಿಕೆಗೆ ಸಾಧ್ಯವಾಗಿಲ್ಲ ಎಂದ ಮೇಲೆ ಸೂಪರ್‌ಸೀಡ್ ಮಾಡುವುದೇ ಸೂಕ್ತ~ ಎಂದು ಅವರು ಸಲಹೆ ನೀಡಿದರು.

ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್.ಶಂಕರ್, `ಉದ್ಯಾನನಗರಿಯನ್ನು ಕಸದ ತೊಟ್ಟಿಯನ್ನಾಗಿಸಿದ ಕೀರ್ತಿ ಆರ್.ಅಶೋಕ ಅವರಿಗೆ ಸಲ್ಲುತ್ತದೆ~ ಎಂದು ವ್ಯಂಗ್ಯವಾಡಿದರು.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆ ವಹಿಸಿದ್ದರು. ಶಾಸಕ ದಿನೇಶ್ ಗುಂಡೂರಾವ್, ಕಾಂಗ್ರೆಸ್ ಮುಖಂಡ ಡಾ.ಬಿ.ಗುರುಪ್ಪನಾಯ್ಡು ಇತರರು ಉಪಸ್ಥಿತರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT