ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾತ್ರಿ ಸದ್ಬಳಕೆ:ಸಂಸದ ಸಲಹೆ

Last Updated 17 ಜನವರಿ 2012, 8:50 IST
ಅಕ್ಷರ ಗಾತ್ರ

ಚಾಮರಾಜನಗರ: `ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಗೆ 80 ಕೋಟಿ ರೂ ಅನುದಾನ ಲಭ್ಯವಿದ್ದು, ಇದರ ಸದ್ಬಳಕೆಗೆ ಅಧಿಕಾರಿಗಳು ಮುಂದಾಗಬೇಕು~ ಎಂದು ಸಂಸದ     ಆರ್. ಧ್ರುವನಾರಾಯಣ ಹೇಳಿದರು.

ನಗರದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಸೋಮವಾರ ಉದ್ಯೋಗ ಖಾತ್ರಿ ಯೋಜನೆಯಡಿ ರಾಜೀವ್‌ಗಾಂಧಿ ಸೇವಾ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಸುಸಜ್ಜಿತವಾಗಿ ರಾಜೀವ್‌ಗಾಂಧಿ ಸೇವಾ ಕೇಂದ್ರ ನಿರ್ಮಿಸಬೇಕು. ಸಭೆ, ಸಮಾರಂಭ, ತರಬೇತಿ, ಮಹಿಳಾ ಸ್ವಸಹಾಯ ಸಂಘಗಳಿಗೆ ಏರ್ಪಡಿಸುವ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲು ಬಳಸಿಕೊಳ್ಳಬೇಕು. ಇದರಿಂದ ಆರ್ಥಿಕ ಸಬಲತೆ ಸಾಧಿಸಲು ಸಹಕಾರಿಯಾ ಗಲಿದೆ ಎಂದರು.

ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಗೆ 80 ಕೋಟಿ ರೂ ಬಿಡುಗಡೆ ಯಾಗಿದೆ. ಇದರಲ್ಲಿ ಚಾಮರಾಜನಗರ ತಾಲ್ಲೂಕಿಗೆ 12 ಕೋಟಿ ರೂ ಅನುದಾನ ಲಭಿಸಲಿದೆ. ಕೊಳ್ಳೇಗಾಲ ತಾಲ್ಲೂಕಿನಲ್ಲಿ ಉತ್ತಮವಾಗಿ ಕೆಲಸ ನಡೆಯುತ್ತಿದೆ. ಉಳಿದ ತಾಲ್ಲೂಕಿನಲ್ಲೂ ಯೋಜನೆಯಡಿ ಕಾಮಗಾರಿ ಕೈಗೊಳ್ಳ ಬೇಕು. ಗ್ರಾಮ ಪಂಚಾಯತಿ ಮಟ್ಟ ದಲ್ಲಿಯೂ ಉದ್ಯೋಗ ಖಾತ್ರಿ ಯೋಜ ನೆಯಡಿ ರಾಜೀವ್‌ಗಾಂಧಿ ಸೇವಾ ಕೇಂದ್ರದ ಕಟ್ಟಡ ನಿರ್ಮಿಸಲಾಗುತ್ತಿದೆ. ತಲಾ 10 ಲಕ್ಷ ರೂ ವೆಚ್ಚದಡಿ 20ಕ್ಕೂ ಹೆಚ್ಚು ಗ್ರಾ.ಪಂ.ಗಳಲ್ಲಿ ಸೇವಾ ಕೇಂದ್ರ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಇದರಿಂದ ಗ್ರಾಮೀಣರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತ ನಾಡಿದರು. ಕಾರ್ಯಕ್ರಮದಲ್ಲಿ ತಾ.ಪಂ. ಅಧ್ಯಕ್ಷೆ ಪದ್ಮಾ ಚಂದ್ರು, ಉಪಾಧ್ಯಕ್ಷ ಪಿ. ಮಹಾಲಿಂಗಸ್ವಾಮಿ, ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿಸಮಿತಿ ಅಧ್ಯಕ್ಷ ಬಿ.ಪಿ. ಪುಟ್ಟಬುದ್ಧಿ, ಸದಸ್ಯ ರಾದ ಜಿ.ಎಸ್. ನಿತ್ಯಾ, ಜಿ. ನಾಗಶ್ರೀ, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಜೈಕೃಷ್ಣ ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT