ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ಬಸ್ ನಿಲ್ದಾಣ ನಿರ್ಮಾಣ ವಿಳಂಬ ಸಾಧ್ಯತೆ

Last Updated 4 ಜೂನ್ 2013, 6:58 IST
ಅಕ್ಷರ ಗಾತ್ರ

ನಾಪೋಕ್ಲು: ಬಿಜೆಪಿ ಮುಖಂಡ ಹಾಗೂ ಕೊಣಂಜಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಖಾದಿರ ಉಮೇಶ್ ಪಳಂಗಪ್ಪ ಅವರನ್ನು ಕೊಲೆಯತ್ನ ಆರೋಪದ ಮೇಲೆ ಬಂಧಿಸಿರುವುದನ್ನು ವಿರೋಧಿಸಿ ಜಿಲ್ಲಾ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನಾಪೋಕ್ಲು ಪೊಲೀಸ್ ಠಾಣೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. 

ಪ್ರತಿಭಟನೆ ನೇತೃತ್ವ ವಹಿಸಿದ್ದ ಜಿಲ್ಲಾ ಬಿಜೆಪಿ ವಕ್ತಾರ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಮಾತನಾಡಿ, ಎಸ್‌ಐ ಷಣ್ಮುಗಂ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಪಾರಾಣೆಯಲ್ಲಿ ನಡೆದ ಮದುವೆ ಸಮಾರಂಭದಲ್ಲಿ ನಡೆದ ಗಲಭೆಯನ್ನು ಶಮನಗೊಳಿಸಲು ಮಧ್ಯಪ್ರವೇಶಿಸಿದ ಬಿಜೆಪಿ ಮುಖಂಡ ಖಾದಿರ ಉಮೇಶ್ ಪಳಂಗಪ್ಪ ಅವರನ್ನು ಕೊಲೆಯತ್ನ ಆರೋಪದ ಮೇಲೆ ಬಂಧಿಸಿದ್ದಾರೆ. ಎಸ್‌ಐ ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.

ಷಣ್ಮುಗಂ ಅವರು ನಾಪೋಕ್ಲು ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆಯಲ್ಲಿ ಶಾಮೀಲಾಗಿದ್ದಾರೆ. ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿ ಕಾನೂನನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಎಲ್ಲ ಆರೋಪಗಳ ಬಗ್ಗೆ ಮೇಲಧಿಕಾರಿಗಳು ತನಿಖೆ ನಡೆಸಿ, ಅವರನ್ನು ಅಮಾನತುಗೊಳಿಸಬೇಕು ಅಥವಾ ವರ್ಗಗೊಳಿಸಬೇಕು ಎಂದು ಒತ್ತಾಯಿಸಿದರು. 15 ದಿನಗಳೊಳಗೆ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ ಮಾತನಾಡಿದ ಕುಶಾಲನಗರ ಡಿವೈಎಸ್‌ಪಿ ಪೌಲ್ ವರ್ಮ, ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಮುಖಂಡರಾದ ತಳೂರ್ ಕಿಶೋರ್‌ಕುಮಾರ್, ರ‌್ಯಾಲಿ ಮಾದಯ್ಯ, ಜಿ. ಪಂ. ಉಪಾಧ್ಯಕ್ಷೆ ಬಿದ್ದಂಡ ಉಷಾದೇವಮ್ಮ, ತಾ. ಪಂ. ಸದಸ್ಯೆ ಕಾಂಡಂಡ ಪ್ರತಿಜಾ ಅಚ್ಚಪ್ಪ, ಗ್ರಾ.ಪಂ. ಅಧ್ಯಕ್ಷೆ  ಕಲ್ಯಾಟಂಡ ಸುಮಿತ್ರಾ ದೇವಯ್ಯ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT