ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ವಿಮಾನಯಾನ ಸಂಸ್ಥೆಗೆ ಪರಿಹಾರ ಇಲ್ಲ

Last Updated 11 ಜನವರಿ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ):  ನಷ್ಟದಲ್ಲಿರುವ ಖಾಸಗಿ ವಿಮಾನಯಾನ ಸಂಸ್ಥೆಗಳಿಗೆ ಪರಿಹಾರ ಪ್ಯಾಕೇಜ್ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ ಸ್ಪಷ್ಟಪಡಿಸಿದೆ.

ಇದೇ ವೇಳೆ ಸಾರ್ವಜನಿಕ ಸ್ವಾಮ್ಯದ ಏರ್ ಇಂಡಿಯಾ ಸಂಸ್ಥೆಗೆ ಕೂಡ ಕಾಲಕ್ಕೆ ತಕ್ಕಂತೆ ಸ್ಪರ್ಧಾತ್ಮಕವಾಗಲು ಸೂಚಿಸಿದೆ.

ಏರ್ ಇಂಡಿಯಾ ಪುನರ್‌ರಚನೆ ಯೋಜನೆಗಾಗಿ ಸಾಲ ನೀಡಲು ಎಸ್‌ಬಿಐ ಕೆಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದು, ಅವನ್ನು ಶೀಘ್ರವೇ ನಿವಾರಿಸಲಾಗುವುದು; ನಾಗರಿಕ ವಿಮಾನಯಾನ ಕಾರ್ಯದರ್ಶಿ ಮತ್ತು ಹಣಕಾಸು ಕಾರ್ಯದರ್ಶಿಯವರು ಈ ಬಗ್ಗೆ ಮಾತುಕತೆ ನಡೆಸಲಿದ್ದಾರೆ ಎಂದು ನಾಗರಿಕ ವಿಮಾನಯಾನ ಸಚಿವ ಅಜಿತ್ ಸಿಂಗ್ ಹೇಳಿದ್ದಾರೆ.

ಭಾರತೀಯ ವಿಮಾನಯಾನ ಸಂಸ್ಥೆಗಳಲ್ಲಿ ವಿದೇಶಿ ಏರ್‌ಲೈನ್ಸ್‌ಗಳಿಗೆ ಷೇರು ಖರೀದಿಸಲು ಅನುಮತಿ ನೀಡುವ ಕುರಿತು ಚರ್ಚಿಸಲು ಸಚಿವರ ಗುಂಪು (ಜಿಒಎಂ) ಶೀಘ್ರವೇ ಸಭೆ ನಡೆಸಲಿದೆ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT