ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ವಿ.ವಿಗೆ ಒಪ್ಪಿಗೆ: ಎಸ್‌ಎಫ್‌ಐ ಪ್ರತಿಭಟನೆ

Last Updated 20 ಅಕ್ಟೋಬರ್ 2012, 18:50 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಖಾಸಗಿ ವಿಶ್ವವಿದ್ಯಾಲಯಕ್ಕೆ ಒಪ್ಪಿಗೆ ನೀಡಿರುವ ಸರ್ಕಾರದ ಕ್ರಮ ಖಂಡಿಸಿ ಭಾರತೀಯ ವಿದ್ಯಾರ್ಥಿ ಒಕ್ಕೂಟದ (ಎಸ್‌ಎಫ್‌ಐ) ಸದಸ್ಯರು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

`ರಾಜ್ಯದಲ್ಲಿ ಈಗಾಗಲೇ ಎರಡು ಖಾಸಗಿ ವಿಶ್ವವಿದ್ಯಾಲಯಗಳಿವೆ. ಈಗ ಗುಲ್ಬರ್ಗದಲ್ಲಿ ಶರಣಬಸವ ಖಾಸಗಿ ವಿ.ವಿಯನ್ನು ಸ್ಥಾಪಿಸಲು ಅನುಮತಿ ನೀಡುವ ಮೂಲಕ ಸರ್ಕಾರ, ಉನ್ನತ ಶಿಕ್ಷಣ ಕ್ಷೇತ್ರವನ್ನು ಸಂಪೂರ್ಣ ಖಾಸಗೀಕರಣ ಮಾಡಲು ಹೊರಟಿದೆ. ಜತೆಗೆ ಶಿಕ್ಷಣವನ್ನು ಮಾರಾಟದ ಸರಕಾಗಿ ಪರಿವರ್ತಿಸಿ, ಖಾಸಗಿ ಕಂಪೆನಿಗಳಿಗೆ ಲಾಭ ಮಾಡಿಕೊಡುವ ದುರುದ್ದೇಶ ಹೊಂದಿರುವುದು ಸ್ಪಷ್ಟವಾಗಿದೆ~ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಮುನಿರಾಜು ಮಾತನಾಡಿ, `ರಾಜ್ಯದಲ್ಲಿ 20 ಸರ್ಕಾರಿ ವಿ.ವಿಗಳು ಕಾರ್ಯನಿರ್ವಹಿಸುತ್ತಿವೆ. ಈ ವಿ.ವಿಗಳು ಮೂಲಸೌಕರ್ಯಗಳ ಕೊರತೆಯಿಂದ ಬಳಲುತ್ತಿವೆ. ಇದರಿಂದಾಗಿ ಉನ್ನತ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರಿ ವಿ.ವಿಗಳ ಗುಣಮಟ್ಟವನ್ನು ಅಭಿವೃದ್ಧಿಪಡಿಸುವ ಬದಲು ಖಾಸಗಿ ವಿ.ವಿಯನ್ನು ಸ್ಥಾಪಿಸಲು ಮುಂದಾಗಿರುವುದು ಖಂಡನೀಯ~ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಘಟನೆಯ ಕಾರ್ಯದರ್ಶಿ ಎಸ್.ಚಿಕ್ಕರಾಜು, ಹುಳ್ಳಿ ಉಮೇಶ್ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT