ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡಿ ಪ್ರದೇಶದಲ್ಲಿ ಭಾಷೆ ಅಭಿವೃದ್ಧಿಗೆ ಕ್ರಮ

Last Updated 10 ಜುಲೈ 2012, 5:35 IST
ಅಕ್ಷರ ಗಾತ್ರ

ಆನೇಕಲ್: ರಾಜ್ಯದ ಗಡಿ ಭಾಗವಾದ ಆನೇಕಲ್ ತಾಲ್ಲೂಕಿನಲ್ಲಿ ಹೆಚ್ಚು ಹೆಚ್ಚು ಕನ್ನಡ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಭಾಷೆಯ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಟಿ.ತಿಮ್ಮಶ್ ನುಡಿದರು.

ತಾಲ್ಲೂಕಿನ ಹಾರಗದ್ದೆಯಲ್ಲಿ  ಬೆಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕನ್ನಡ ಕಟ್ಟುವ ಕಾರ್ಯದಲ್ಲಿ ಎಲ್ಲ ಕನ್ನಡ ಮನಸ್ಸುಗಳು ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕು ಹಾಗೂ ಎಲ್ಲರ ಸಹಕಾರ ಪಡೆದು ನಿರಂತರವಾಗಿ ಸಾಂಸ್ಕೃತಿಕ ಹಾಗೂ ಸಾಹಿತ್ಯ ಕಾರ್ಯಕ್ರಮಗಳನ್ನು ರೂಪಿಸಬೇಕು. ಪ್ರತಿ ವಿಧಾನಸಭಾ ಕ್ಷೇತ್ರದ ಕನ್ನಡ ಸಾಹಿತ್ಯ ಪರಿಷತ್ ಶಾಖೆಗೆ ಕನಿಷ್ಠ 25 ಸಾವಿರ ರೂಪಾಯಿ ನಿರ್ವಹಣಾ ಅನುದಾನ ನೀಡಲು ಕೇಂದ್ರ ಕಸಾಪ ಅಧ್ಯಕ್ಷರಿಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದರು.

ಜಿಲ್ಲೆಯ ಎಲ್ಲ 33 ವಿಧಾನಸಭಾ ಕ್ಷೇತ್ರಗಳ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರ ನೇಮಕ ಪ್ರಕ್ರಿಯೆ ಪ್ರಾರಂಭವಾಗಿದೆ. ಎಲ್ಲ ಆಕಾಂಕ್ಷಿಗಳನ್ನು ವಿಶ್ವಾಸಕ್ಕೆ ಪಡೆದು ಅರ್ಹರನ್ನು ಆಯ್ಕೆ ಮಾಡಲಾಗುತ್ತಿದೆ ಎಂದರು.

ಬೆಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಕಂಠೀರವ ನೃತ್ಯ ಸಭಾ ಅಧ್ಯಕ್ಷ ಧನಂಜಯ ಅವರನ್ನು ನೇಮಕ ಮಾಡಲಾಗಿದೆ ಎಂದು ಈ ಸಂದರ್ಭದಲ್ಲಿ ಪ್ರಕಟಿಸಿ, ನೇಮಕಾತಿ ಪತ್ರ ನೀಡಿದರು.

ಜಿ.ಪಂ. ಮಾಜಿ ಅಧ್ಯಕ್ಷ ಎಚ್.ಎಸ್.ಬಸವರಾಜು ಮಾತನಾಡಿ, ಜಿಲ್ಲಾ, ತಾಲ್ಲೂಕು ಘಟಕದ ಅಧ್ಯಕ್ಷರು ಎಲ್ಲರ ಸಹಕಾರ ಪಡೆದು ಪರಿಷತ್‌ನ ಚಟುವಟಿಕೆ ನಡೆಸಬೇಕು ಎಂದರು.

ಚನ್ನಪಟ್ಟಣ ಸಹೋದರಿಯರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು. ಜಿಲ್ಲಾ ಕಸಾಪ ಗೌರವಾಧ್ಯಕ್ಷರಾದ ಪಿನಾಕಪಾಣಿ, ನಂ.ನಂಜಪ್ಪ, ಮಾಜಿ ಅಧ್ಯಕ್ಷ ಶ್ರ.ದೇ.ಪಾರ್ಶ್ವನಾಥ್, ಗ್ರಾ.ಪಂ. ಅಧ್ಯಕ್ಷೆ ರತ್ನಮ್ಮ ರಾಜಣ್ಣ, ಸಂಚಾಲಕರಾದ ಸಮೀವುಲ್ಲಾ ಖಾನ್, ನೆ.ಲ.ರಾಮಲಿಂಗಶೆಟ್ಟಿ, ಗ್ರಾ.ಪಂ. ಮಾಜಿ ಅಧ್ಯಕ್ಷರಾದ ಕೆ.ಎಸ್.ನಟರಾಜ್, ಟಿ.ಎಸ್.ಉಮಾದೇವಿ, ನೂತನ ಅಧ್ಯಕ್ಷ ಧನಂಜಯ, ಶ್ರೀನಿವಾಸ್ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT