ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡಿಯಲ್ಲಿ ಸರ್ಕಾರಿಬಸ್ ಸಂಚಾರ ಪುನರಾರಂಭ

Last Updated 10 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಚಾಮರಾಜನಗರ: ಕಾವೇರಿ ಹೋರಾಟದ ಪರಿಣಾಮ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕೆಎಸ್‌ಆರ್‌ಟಿಸಿ ಅಂತರ ರಾಜ್ಯ ಬಸ್ ಸಂಚಾರ ಬುಧವಾರ ಪುನರಾರಂಭಗೊಂಡಿದೆ.

ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ-209 ತಮಿಳುನಾಡಿನ ಸತ್ಯಮಂಗಲ, ಕೊಯಮತ್ತೂರು, ಈರೋಡ್‌ಗೆ ಸಂಪರ್ಕ ಕಲ್ಪಿಸುತ್ತದೆ.  ಕೊಳ್ಳೇಗಾಲ- ಮಲೆಮಹದೇಶ್ವರ ಬೆಟ್ಟ ಮಾರ್ಗದ ರಸ್ತೆಯು ಮೆಟ್ಟೂರಿಗೆ ಸಂಪರ್ಕ ಕಲ್ಪಿಸುತ್ತದೆ.

ಆದರೆ, ಕಾವೇರಿ ಹೋರಾಟ ತೀವ್ರಗೊಂಡಿದ್ದ ಹಿನ್ನೆಲೆಯಲ್ಲಿ ಮುಂಜಾಗ್ರತೆಯಾಗಿ ಈ ಮಾರ್ಗಗಳಲ್ಲಿ ಬಸ್, ಲಾರಿ ಸೇರಿದಂತೆ ಇತರೇ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಬಂಡೀಪುರ ರಾಷ್ಟ್ರೀಯ ಉದ್ಯಾನದ ಮಾರ್ಗವಾಗಿ ನೆರೆಯ ರಾಜ್ಯಕ್ಕೆ ಸಂಪರ್ಕ ಬೆಸೆಯುವ ಮೈಸೂರು- ಊಟಿ ರಸ್ತೆಯಲ್ಲೂ ಸಂಚಾರ ನಿರ್ಬಂಧಿಸಲಾಗಿತ್ತು.

ಪ್ರಸ್ತುತ ತಮಿಳುನಾಡಿಗೆ ಕಾವೇರಿ ನೀರು ಹರಿಯುವುದು ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿಯೂ ಹೋರಾಟದ ಕಾವು ಕಡಿಮೆಯಾಗಿದೆ. ಹೀಗಾಗಿ, ವಾಹನಗಳ ಸಂಚಾರ ಪುನರಾರಂಭಗೊಂಡಿದೆ. ತಮಿಳುನಾಡಿನಿಂದಲೂ ಬಸ್‌ಗಳು ಕರ್ನಾಟಕಕ್ಕೆ ಪ್ರವೇಶಿಸುತ್ತಿವೆ.
`ನಿತ್ಯ ಮೈಸೂರು, ಬೆಂಗಳೂರು ಹಾಗೂ ಚಾಮರಾಜನಗರ ವಿಭಾಗದಿಂದ ತಮಿಳುನಾಡಿಗೆ 20 ಬಸ್‌ಗಳು ಸಂಚರಿಸುತ್ತವೆ.

ಕಾವೇರಿ ಹೋರಾಟದ ಹಿನ್ನೆಲೆಯಲ್ಲಿ ನೆರೆಯ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಜಿಲ್ಲೆಯ ಮೂರು ಮಾರ್ಗದಲ್ಲಿಯೂ ಕಳೆದ ಹತ್ತು ದಿನದಿಂದ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಹೀಗಾಗಿ, ವಿಭಾಗಕ್ಕೆ ಸುಮಾರು 1 ಕೋಟಿ ರೂ ಆದಾಯ ಖೋತಾ ಆಗಿದೆ.

ಈಗ ಬಸ್ ಸೇವೆ ಪುನರಾರಂಭಿಸಲಾಗಿದೆ. ತಮಿಳುನಾಡಿನಿಂದಲೂ ರಾಜ್ಯಕ್ಕೆ ಬಸ್ ಸಂಚಾರ ಪುನರಾರಂಭಗೊಂಡಿದೆ~ ಎಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಬಿ.ವಿ. ಶ್ರೀನಿವಾಸ್ `ಪ್ರಜಾವಾಣಿ~ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT