ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣಿ ವರದಿ ಜನತೆ ಮುಂದಿಡಿ

Last Updated 7 ಜನವರಿ 2012, 6:20 IST
ಅಕ್ಷರ ಗಾತ್ರ

ತಿ.ನರಸೀಪುರ: ಸಂವಿಧಾನದ ಆಶಯ ಜಾರಿಗೊಳಿಸಿ ದಲಿತರ ಅಭಿವೃದ್ಧಿಯಲ್ಲಿ ವಿಫಲವಾಗಿರುವ ಸರ್ಕಾರದ ವಿರುದ್ಧ ಜನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಲಕ್ಷ್ಮೀನಾರಾಯಣ ನಾಗವಾರ ತಿಳಿಸಿದರು.

ಪಟ್ಟಣದ ವಿದ್ಯೋದಯ ಕಾಲೇಜು ವೃತ್ತದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ನಡೆದ `ಮರಳಿ ಹಳ್ಳಿ ಕಡೆಗೆ ದಸಂಸ ನಡಿಗೆ~ ಜನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.  ರಾಜ್ಯದ ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಪಾರದರ್ಶಕ ಆಡಳಿತದ ಭರವಸೆ ನೀಡಿದ ಮುಖ್ಯಮಂತ್ರಿ ಸದಾನಂದಗೌಡ ಅವರು ಹೇಳಿದಂತೆ ನಡೆದುಕೊಳ್ಳುತ್ತಿಲ್ಲ.  ದಲಿತರಲ್ಲಿ ಒಡಕು ಮೂಡಿಸಲು ಉಪಜಾತಿಗಳ ಬಗ್ಗೆ ಪ್ರಸ್ತಾಪಿಸಿ ದಲಿತರ ವಿರುದ್ಧ ಅವರನ್ನೇ ಎತ್ತಿಕಟ್ಟುವ ಪ್ರಯತ್ನಗಳು ನಡೆಯುತ್ತಿದೆ.

ನ್ಯಾಯಮೂರ್ತಿ ಸಂತೋಷ್ ಹೆಗಡೆ ನೀಡಿರುವ ಗಣಿ ಅಕ್ರಮದ ತನಿಖಾ ವರದಿಯ ಸಂಪೂರ್ಣ ಚಿತ್ರಣವನ್ನು ಸರ್ಕಾರ  ಜನರ ಮುಂದಿಡಬೇಕು. ಹಣ ಬಲ ಮತ್ತು ತೋಳ್ಬಳದ ರಾಜಕಾರಣ ನಿಲ್ಲಬೇಕು. ಕೋಮುವಾದಿ ರಾಜಕಾರಣ ಮಾಡುವ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ವಿರುದ್ಧ ಜನರು ಜಾಗೃತರಾಗಬೇಕು. ದಲಿತರು ಮತ್ತು ಹಿಂದುಳಿದ ವರ್ಗದವರು ಸಂಘಟಿತರಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಟ ಮುಂದುವರಿಸುವಂತೆ ಅವರು ಸಲಹೆ ನೀಡಿದರು.

ಜಾಥಾ ಉದ್ಘಾಟಿಸಿದ ಜಿ.ಪಂ ಮಾಜಿ ಅಧ್ಯಕ್ಷ ಎಸ್.ಎನ್.ಸಿದ್ಧಾರ್ಥ, ದಲಿತ ಸಂಘಟನೆಗಳು ಅನೇಕ ಕಾರಣಗಳಿಂದ ವಿಂಗಡಣೆಯಾಗಿ ಹೋರಾಟ ಕುಂಠಿತಗೊಳ್ಳುತ್ತಿರುವುದು ವಿಷಾದನೀಯ. ಅಂಬೇಡ್ಕರ್ ಅವರು ಶೋಷಿತ ಸಮುದಾಯ ಮಾತ್ರವಲ್ಲದೇ ಹಿಂದುಳಿದ ಹಾಗೂ ಮಹಿಳೆಯರ ಹಕ್ಕುಗಳ ಬಗ್ಗೆ ಹೋರಾಟ ಮಾಡಿದರು. ಅವರ ಆಶಯಗಳು ಈಡೇರುತ್ತಿಲ್ಲ. ಈ ನಿಟ್ಟಿನಲ್ಲಿ ಎಲ್ಲಾ ದಲಿತ ಹಾಗೂ ಹಿಂದುಳಿದ ವರ್ಗಗಳ ಸಂಘಟನೆಗಳು ಒಗ್ಗೂಡಿ ಹೋರಾಟ ಮಾಡುವ ಅಗತ್ಯವಿದೆ ಎಂದರು.

ಮೂಗೂರು ಜಿಲ್ಲಾ ಪಂಚಾಯಿತಿ ಸದಸ್ಯೆ ಎಂ.ಸುಧಾ ಅಂಬೇಡ್ಕರ್ ಭಾವಚಿತ್ರ ಅನಾವರಣಗೊಳಿಸಿದರು. ಜಿಲ್ಲಾ ಸಂಚಾಲಕ ದೇವಗಳ್ಳಿ ಸೋಮಶೇಖರ್, ಅಂಬೇಡ್ಕರ್ ಅಭಿವೃದ್ಧಿ ತಾಲ್ಲೂಕು ಸಂಘದ ಅಧ್ಯಕ್ಷ ಕರುಹಟ್ಟಿ ಮಹಾದೇವಯ್ಯ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಬಸವಣ್ಣ, ಉಪಾಧ್ಯಕ್ಷ ಮಲ್ಲಿಕಾರ್ಜುನ ಚಿಕ್ಕು, ಸದಸ್ಯ ಟೆಂಪೋ ಮಹಾದೇವಣ್ಣ, ತಾಪಂ ಸದಸ್ಯ ಅಂದಾನಿ, ಮುಖಂಡರಾದ ವೀರಭದ್ರಪ್ಪ, ಕೆ.ಎನ್.ಪ್ರಭುಸ್ವಾಮಿ, ಜಯಣ್ಣ, ಚಿನ್ನಸ್ವಾಮಿ, ಲಿಂಗಪ್ಪಾಜಿ, ಆಲಗೂಡು ಶಿವಣ್ಣ, ಚಿನ್ನಸ್ವಾಮಿ, ಬಸವಣ್ಣ, ಮಹೇಶ್, ಶಾಂತಕುಮಾರ್, ರಾಜು, ನಂಜುಂಡಯ್ಯ  ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT