ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣಿಗಾರಿಕೆ ತಡೆಗೆ ಆಗ್ರಹಿಸಿ ಪ್ರತಿಭಟನೆ

Last Updated 24 ಜನವರಿ 2012, 19:30 IST
ಅಕ್ಷರ ಗಾತ್ರ

ಕುಣಿಗಲ್:  ತಾಲ್ಲೂಕಿನ ಹಂಗರಹಳ್ಳಿ, ತರೀಕೆರೆ ಗ್ರಾಮಗಳಲ್ಲಿ ನಡೆಯುತ್ತಿ ರುವ ಅಕ್ರಮ ಗಣಿಗಾರಿಕೆಯನ್ನು ಕೂಡಲೆ ನಿಲ್ಲಿಸಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ ಒಕ್ಕಲಿಗ ಧರ್ಮ ಮಹಾಸಭಾದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಮಂಗಳವಾರ ಬೆಳಿಗ್ಗೆ ಪ್ರವಾಸಿ ಮಂದಿರದ ಬಳಿ ಸಂಘಟಿತರಾದ ನೂರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ತೆರಳಿ ತಹಶೀಲ್ದಾರ್ ಕಚೇರಿ ಬಳಿ ಸಭೆ ನಡೆಸಿದರು. ಅರೇಶಂಕರ ಮಠದ ಸಿದ್ಧರಾಮ ಚೈತನ್ಯ ಸ್ವಾಮೀಜಿ ಮಾತನಾಡಿ, ಸಂತೆಮಾವತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಂಗರಹಳ್ಳಿ ಗ್ರಾಮದ ಸರ್ವೆ ನಂ. 46 ಮತ್ತು ಟಿ.ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತರೀಕೆರೆ ಗ್ರಾಮದ ಸರ್ವೆ ನಂ. 81ರ ಗೋಮಾಳದ ಭೂಮಿ ವಶಪಡಿಸಿಕೊಂಡಿರುವ ಕೆಲ ಕ್ರಷರ್ ಕಂಪೆನಿಗಳು ನಿರಂತರವಾಗಿ ಅಕ್ರಮ ಗಣಿಗಾರಿಕೆ ನಡೆಸುತ್ತಿವೆ ಎಂದು ಆರೋಪಿಸಿದರು.

ಇದಕ್ಕೆ ಪ್ರಬಲ ಸ್ಫೋಟಕ ಬಳಸುತ್ತಿರುವುದರಿಂದ ಸುತ್ತಮುತ್ತಲ ಮನೆಗಳಿಗೆ ಹಾನಿಯುಂಟಾಗಿದ್ದು, ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಲಾರಿಗಳ ಸಂಚಾರದಿಂದ ಗ್ರಾಮೀಣ ಸಂಪರ್ಕ ರಸ್ತೆಗಳು ಹದಗೆಟ್ಟಿದ್ದು ಪರಿಸರ ಮಾಲಿನ್ಯ ಉಂಟಾಗುತ್ತಿದೆ ಎಂದು ಆರೋಪಿಸಿದರು. ಗಣಿಗಾರಿಕೆ ನಿಲ್ಲಿಸಿ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದರು.

ಸಭಾದ ಜಿಲ್ಲಾ ಉಪಾಧ್ಯಕ್ಷ ಬಿ.ಗಿರೀಶ್, ತಾಲ್ಲೂಕು ಅಧ್ಯಕ್ಷ ಶಿವಕುಮಾರ್, ಹೋಬಳಿ ಅಧ್ಯಕ್ಷ ಟಿ.ಎಂ.ಜಗದೀಶ್ ಹಾಗೂ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT