ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಗಣಿತಕ್ಕೆ ಭಾರತೀಯರ ಕೊಡುಗೆ ಅಪಾರ'

Last Updated 24 ಡಿಸೆಂಬರ್ 2012, 6:59 IST
ಅಕ್ಷರ ಗಾತ್ರ

ಜಾಲಹಳ್ಳಿ: ಸೊನ್ನೆಯನ್ನು ಕಂಡುಹಿಡಿಯುವ ಮೂಲಕ ಭಾರತೀಯರು ಗಣಿತಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದಾರೆ ಎಂದು ಸರ್ಕಾರಿ ಪ್ರೌಢ ಶಾಲೆಯ ಗಣಿತ ಶಿಕ್ಷಕ ಸದಾಶಿವ ಹೇಳಿದರು.

ಅವರು ಪಟ್ಟಣದ ಸರ್ಕಾರಿ ಕನ್ಯಾ ಪ್ರೌಢ ಶಾಲೆಯಲ್ಲಿ ಶನಿವಾರ ಗಣಿತ ಶಾಸ್ತ್ರಜ್ಞ ಶ್ರೀನಿವಾಸ ರಾಮಾನುಜನ್ ರವರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಗಣಿತ ವರ್ಷಾಚರಣೆ ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರಾಗಿ ಭಾಗವಹಿಸಿ ಮಾತನಾಡಿದರು.

ಭಾರತೀಯ ಗಣಿತಶಾಸ್ತ್ರ ಬಹಳ ಪ್ರಾಚೀನ ಇತಿಹಾಸ ಹೊಂದಿದ್ದು ಬಹಳಷ್ಟು ಜನ ಭಾರತೀಯರು ಗಣಿತಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಅಂತವರಲ್ಲಿ ರಾಮಾನುಜನ್‌ರವರು ಕೂಡ ಒಬ್ಬಾರಾಗಿದ್ದಾರೆಂದು ತಿಳಿಸಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಗಣಿತ ಮತ್ತು ವಿಜ್ಞಾನ ವಿಷಯಗಳ ಅಧ್ಯಯನ ಬಹಳ ಮಹತ್ವ ಪಡೆದುಕೊಂಡಿದೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಧ್ಯಾಯ ಶೇಖಣ್ಣ, ಶಿಕ್ಷಕರಾದ ಗೀತಾ ಮೂಲಿಮನಿ, ವಿಶ್ವರಾಜ ಉಪಸ್ಥಿತರಿದ್ದರು.
ಶಿಕ್ಷಕರಾದ ಜಯಕುಮಾರ ಸ್ವಾಗತಿಸಿದರು. ವಿಜಯಕುಮಾರ್ ನಿರೂಪಿಸಿದರು. ಡಾ.ಸಂಜಯಮಾಲೆ ವಂದಿಸಿದರು.

ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ಅಲ್ಲದೇ ವಿಜ್ಞಾನ ಮತ್ತು ಗಣಿತ ವಸ್ತು ಪ್ರದರ್ಶನವನ್ನು ಕೂಡ ಏರ್ಪಡಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT