ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗದಗ: ಆಯೋಗದ ಅಧ್ಯಕ್ಷರ ನೇಮಕಕ್ಕೆ ಆಗ್ರಹ

Last Updated 27 ಆಗಸ್ಟ್ 2011, 5:10 IST
ಅಕ್ಷರ ಗಾತ್ರ

ಗದಗ: ಹಿಂದುಳಿದ ವರ್ಗಗಳ ಆಯೋಗಕ್ಕೆ ತಕ್ಷಣವೇ ಅಧ್ಯಕ್ಷ ಹಾಗೂ ಸದಸ್ಯರನ್ನು ನೇಮಕ ಮಾಡ ಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.

ನಗರದ ಕನಕ ಭವನದಲ್ಲಿ ಶುಕ್ರವಾರ ನಡೆದ ಕನಕೋತ್ಸವ ಹಾಗೂ ಡಿ. ದೇವರಾಜ ಅರಸು ಜಯಂತ್ಯು ತ್ಸವನ್ನು ಉದ್ಘಾಟಿಸಿ ಅವರು ಮಾತನಾ ಡಿದರು.

ಬಿಜೆಪಿ ಸರ್ಕಾರ ಹಿಂದುಳಿದ ವರ್ಗಗಳ ಆಯೋಗಕ್ಕೆ ಅಧ್ಯಕ್ಷರು, ಸದಸ್ಯರನ್ನು ಒಂದು ವರ್ಷದಿಂದ ನೇಮಕ ಮಾಡಿಲ್ಲ. ಇದು ಈ ಸರ್ಕಾರಕ್ಕೆ ಹಿಂದುಳಿದ ವರ್ಗಗಳ ಬಗೆ ಇರುವ ನಿರ್ಲಕ್ಷ್ಯತೆಯನ್ನು ತೋರಿಸುತ್ತದೆ.

ರಾಜ್ಯದಲ್ಲಿ ಹಿಂದುಳಿದ ವರ್ಗದವರನ್ನು ತುಳಿಯಲು ಪಟ್ಟಭದ್ರ ಹಿತಾಸಕ್ತಿಗಳು ಪ್ರಯತ್ನಿಸುತ್ತಿವೆ ಎಂದು ಅವರು ಆರೋಪಿಸಿದರು.

ಬಿಜೆಪಿ ಹಿಂದುಳಿದ ವರ್ಗಗಳ ಹಿತಶತ್ರುವಾಗಿದೆ. ಇದನ್ನು ಹೇಳಲು ಹೊರಟರೆ ನಮ್ಮನ್ನು ಜಾತಿವಾದಿಗಳು ಎಂದು ಹಣೆಪಟ್ಟಿ ಕಟ್ಟುವ ಪ್ರಯತ್ನ ನಡೆಯುತ್ತದೆ. ಸಾಮಾಜಿಕ ಪರಿವರ್ತನೆಯ ವಿರೋಧಿಗಳಿಂದ ಸಮಾಜದ ಉದ್ಧಾರ ಎಂದಿಗೂ ಸಾಧ್ಯವಿಲ್ಲ. ಸಂವಿಧಾನದತ್ತವಾದ ಸೌಲಭ್ಯಗಳನ್ನು ಪಡೆದುಕೊಳ್ಳಲು ಹಿಂದುಳಿದ ವರ್ಗಗಳು ಜಾಗೃತರಾಗಬೇಕು ಎಂದರು.

ಮಾಜಿ ಸಚಿವರಾದ ಎಚ್.ಕೆ. ಪಾಟೀಲ, ಬಿ.ಆರ್. ಯಾವಗಲ್, ಮಾಜಿ ಶಾಸಕರಾದ ಜಿ.ಎಸ್. ಗಡ್ಡದ್ದೇವರಮಠ, ಡಿ.ಆರ್. ಪಾಟೀಲ, ಜಿ.ಎಸ್. ಪಾಟೀಲ, ಸಿ.ಎಸ್. ಶಿವಳ್ಳಿ, ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಫಕೀರಪ್ಪ ಹೆಬಸೂರ, ಶಾಸಕ ಶ್ರೀಶೈಲಪ್ಪ ಬಿದರೂರ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಚಂಬವ್ವ ಪಾಟೀಲ, ಉಪಾಧ್ಯಕ್ಷ ಬೀರಪ್ಪ ಬಂಡಿ, ನಗರಸಭೆ ಅಧ್ಯಕ್ಷ ಶಿವಣ್ಣ ಮುಳಗುಂದ, ಉಪಾಧ್ಯಕ್ಷೆ ಖಮರ್‌ಸುಲ್ತಾನಾ ನಮಾಜಿ, ಜಿಲ್ಲಾ ಪಂಚಾಯಿತಿ ಸದಸ್ಯ ಹೇಮಗಿರೀಶ ಹಾವಿನಾಳ ಮತ್ತಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT