ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಂಜಾ ಮಾರಾಟ: ಮೂವರ ಬಂಧನ

Last Updated 1 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಳಗಾವಿ: ತಾಲ್ಲೂಕಿನ ಸಾಂಬ್ರಾ ಬಳಿ ಶುಕ್ರವಾರ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, 10.30 ಲಕ್ಷ ರೂ ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿಯ ಸಂಜು ಜಿ. ತಿಕೋಟಾ, ಜಮಖಂಡಿ ತಾಲ್ಲೂಕಿನ ಬಸಯ್ಯ ಎಸ್. ಅರಗುಂಡಿ ಹಾಗೂ ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಸಂಶಿ ಗ್ರಾಮದ ಉದಯಕುಮಾರ ಎಸ್.ದಾನಣ್ಣವರ ಅವರನ್ನು ಬಂಧಿಸಲಾಗಿದೆ.

ಬೆಳಗಾವಿಯ ಸಾಂಬ್ರಾ ರಸ್ತೆಯ ಮಾರುತಿ ನಗರ ಪೆಟ್ರೋಲ್ ಪಂಪ್ ಸಮೀಪ ಮೂವರು ಗಾಂಜಾ ಮಾರಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಪಡೆದ ಮಾರ್ಕೆಟ್ ಉಪ ವಿಭಾಗದ ಎಎಸ್‌ಪಿ ರವಿ ಚನ್ನಣವರ ನೇತೃತ್ವದ ತಂಡವು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳಿಂದ 10.30 ಲಕ್ಷ ರೂ. ಮೌಲ್ಯದ ಗಾಂಜಾ, 20 ಸಾವಿರ ರೂಪಾಯಿ ನಗದು ಹಾಗೂ ಕ್ರೂಸರ್ ವಾಹನ ಸೇರಿದಂತೆ ಒಟ್ಟು 13.50 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT