ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಂಧಿ ತತ್ವ ಮುಂದುವರಿಯಲಿ

Last Updated 1 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಮೌಲ್ಯಗಳು ಕುಸಿಯುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಗಾಂಧೀಜಿಯ ತತ್ವಗಳು ಅಗತ್ಯವಾಗಿದ್ದು, ಇದನ್ನು ಅಳವಡಿಸಿಕೊಳ್ಳುವತ್ತ ಯುವಪೀಳಿಗೆಯು ಚಿಂತನೆ ನಡೆಸಬೇಕು~ ಎಂದು ವಿಧಾನ ಪರಿಷತ್ ಸದಸ್ಯ ಎಂ.ವಿ.ರಾಜಶೇಖರನ್ ಹೇಳಿದರು.

ರಾಜಕೀಯ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯು ನಗರದ ಕನ್ನಡ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಮಹಾತ್ಮಗಾಂಧಿ ಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

`ಜೀವಂತ ಬದುಕಿದ್ದಾಗಲೂ ಮತ್ತು ಸತ್ತ ನಂತರವೂ ಪದೇ ಪದೇ ಕಾಡುವ ವ್ಯಕ್ತಿತ್ವವೆಂದರೆ ಗಾಂಧೀಜಿ. ಅವರ ತತ್ವ ಮತ್ತು ಆದರ್ಶಗಳು ದೇಶವನ್ನು ವಿಶ್ವಕ್ಕೆ ಪರಿಚಯಿಸಿತು. ಪ್ರಸ್ತುತ ರಾಜಕೀಯದಲ್ಲಿ ಗಾಂಧೀಯ ತತ್ವಗಳು ಹೇಳಹೆಸರಿಲ್ಲದಂತಾಗಿದೆ~ ಎಂದು ಹೇಳಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ಡಾ.ಹೊ.ಶ್ರೀನಿವಾಸಯ್ಯ ಮಾತನಾಡಿ, `ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಗಾಂಧೀಜಿಯು ಪ್ರಸ್ತುತ ಪಡಿಸಿದ ವಿಚಾರಗಳನ್ನು ರಾಜಕೀಯ ವ್ಯವಸ್ಥೆಯು ಈವರೆಗೂ ಸಮರ್ಪಕವಾಗಿ ಅರ್ಥೈಸಿಕೊಂಡಿಲ್ಲ. ಇದರಿಂದ ದೇಶಕ್ಕೆ ಅಪಾರ ನಷ್ಟ ಉಂಟಾಗಿದೆ~ ಎಂದು ಖೇದ ವ್ಯಕ್ತಪಡಿಸಿದರು.

`ಬಾಪುವಿನ ಆದರ್ಶಗಳು ಪುಸ್ತಕಗಳಿಗೆ ಮಾತ್ರ ಸೀಮಿತಗೊಳ್ಳದೇ , ಅಳವಡಿಸಿಕೊಳ್ಳುವಲ್ಲಿ ಯುವ ಪೀಳಿಗೆ ಮುಂದುವರಿಯಬೇಕು. ಅದಕ್ಕೆ ಅಗತ್ಯವಿರುವ ವಾತಾವರಣವನ್ನು ಹಿರಿಯರು ಕಲ್ಪಿಸಬೇಕಿದೆ~ ಎಂದರು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು. ಬೇಲಿಮಠದ ಶಿವರುದ್ರ ಸ್ವಾಮೀಜಿ, ಜೆಡಿಎಸ್ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂಧ್ಯ, ದೂರದರ್ಶನ ಕೇಂದ್ರದ ಉಪ ಮಹಾನಿರ್ದೇಶಕ ಡಾ.ಮಹೇಶ್ ಜೋಶಿ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT