ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾ.ಪಂ. ಉಪಾಧ್ಯಕ್ಷರ ಅವಿರೋಧ ಆಯ್ಕೆ

Last Updated 24 ಡಿಸೆಂಬರ್ 2012, 20:02 IST
ಅಕ್ಷರ ಗಾತ್ರ

ಹೊಸಕೋಟೆ: ತಾಲ್ಲೂಕಿನ ಗಿಡ್ಡಪ್ಪನಹಳ್ಳಿ ಗ್ರಾ.ಪಂ.ಉಪಾಧ್ಯಕ್ಷರಾಗಿ ಯಣಗುಂಟೆ ಗ್ರಾಮದ ವೈ.ಸಿ.ಶ್ರೀನಿವಾಸ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿತ್ತು. ಆದರೆ, ಯಾರೂ ನಾಮಪತ್ರ ಸಲ್ಲಿಸದ ಕಾರಣ ಆ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆ ನಡೆಯಲಿಲ್ಲ ಎಂದು ಚುನಾವಣಾಧಿಕಾರಿ ವಿ.ಸಿ.ಬಸವರಾಜೇಗೌಡ ತಿಳಿಸಿದ್ದಾರೆ.

ಲಕ್ಕೊಂಡಹಳ್ಳಿ ಗ್ರಾ.ಪಂ.ಅಧ್ಯಕ್ಷರಾಗಿ ವೆಂಕಟಾಪುರದ ವರಲಕ್ಷ್ಮಿ ಆಯ್ಕೆಯಾಗಿದ್ದಾರೆ. ಅವರು 12-5 ಮತಗಳ ಅಂತರದಿಂದ ಮುನಿತಾಯಮ್ಮ ವಿರುದ್ಧ ಜಯ ಗಳಿಸಿದರು. ಉಪಾಧ್ಯಕ್ಷರಾಗಿ ಭಾರತೆಗೌಡ ಅವರು 9-8 ಮತಗಳ ಅಂತರದಿಂದ ಮಂಜುಳಾ ವಿರುದ್ಧ ಜಯ ಗಳಿಸಿದರು.

ಒರೋಹಳ್ಳಿ ಗ್ರಾ.ಪಂ.ಅಧ್ಯಕ್ಷರಾಗಿ ನಾಗಮ್ಮ, ಉಪಾಧ್ಯಕ್ಷರಾಗಿ ಜೆ. ಲೋಕೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT