ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಯಾಳುಗಳು ಭಾರತಕ್ಕೆ ವಾಪಸು

Last Updated 14 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಸೆಂಟ್ರಲ್ ಆಫ್ರಿಕನ್ ರಿಪಬ್ಲಿಕ್ ರಾಜಧಾನಿ ಬಾಂಗಿ ವಿಮಾನ ನಿಲ್ದಾಣದ ಬಳಿ ಕಳೆದ ತಿಂಗಳು ನಡೆದ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ಆರು ಭಾರತೀಯರನ್ನು ಭಾನುವಾರ ಮುಂಜಾನೆ ನವದೆಹಲಿಗೆ ಕರೆತಲಾಗಿದೆ. ಅವರನ್ನು ಇಲ್ಲಿನ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ಎಐಐಎಂಎಸ್) ದಾಖಲಿಸಲಾಗಿದೆ.

ಚಾದ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರನ್ನು ಫ್ರಾನ್ಸ್‌ನ ವಿಶೇಷ ವಿಮಾನದಲ್ಲಿ ನವದೆಹಲಿಗೆ ಕರೆತರಲಾಯಿತು. ವಿಮಾನ ನಿಲ್ದಾಣದಿಂದ ನೇರವಾಗಿ `ಎಐಐಎಂಎಸ್'ಗೆ ರವಾನಿಸಲಾಯಿತು. ಗಾಯಾಳುಗಳ ಆರೋಗ್ಯ ಗಂಭೀರ ಸ್ಥಿತಿಯಲ್ಲೇನೂ ಇಲ್ಲ ಎಂದು ವಿದೇಶಾಂಗ ಸಚಿವಾಲಯದ ಮೂಲಗಳು ತಿಳಿಸಿವೆ.

ಬಾಂಗಿ ವಿಮಾನ ನಿಲ್ದಾಣಕ್ಕೆ ಮಾರ್ಚ್ 25ರಂದು ವಾಹನದಲ್ಲಿ ಬರುತ್ತಿದ್ದವರನ್ನು ಬಂಡುಕೋರರು ಎಂದು ತಪ್ಪಾಗಿ ಭಾವಿಸಿದ ಫ್ರಾನ್ಸ್ ಯೋಧರು ಗುಂಡಿನ ದಾಳಿ ನಡೆಸಿದ್ದರು.  ಇದರಿಂದ ಕರ್ನಾಟಕದ ಕುಂದಾಪುರ ತಾಲ್ಲೂಕಿನ ಕೃಷ್ಣಯ್ಯ ಮೊಗವೀರ ಸೇರಿ ಇಬ್ಬರು ಭಾರತೀಯರು ಸಾವನ್ನಪ್ಪಿದ್ದರು. ಇತರ ಆರು ಭಾರತೀಯರು ಗಾಯಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT