ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಿಡಮೂಲಿಕೆ ಆರೋಗ್ಯಕ್ಕೆ ಹಾನಿಕರ ಅಲ್ಲ

Last Updated 21 ಜನವರಿ 2011, 8:25 IST
ಅಕ್ಷರ ಗಾತ್ರ

ರಿಪ್ಪನ್‌ಪೇಟೆ: ಪುರಾತನ ಕಾಲದಿಂದಲೂ ನಡೆದುಕೊಂಡು ಬಂದಿರುವ ಗಿಡಮೂಲಿಕೆ ಔಷಧಗಳು ಮಾನವನ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಜಿ.ಪಂ. ಸದಸ್ಯ ಕಲಗೋಡು ರತ್ನಾಕರ ಹೇಳಿದರು.

ಇಲ್ಲಿನ ಗ್ರಾ.ಪಂ. ಆವರಣದಸಭಾ ಭವನದಲ್ಲಿ ಬುಧವಾರ ಜಿಲ್ಲಾ ಆಯುಷ್ ಅಯುರ್ವೇದ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಚಿಕಿತ್ಸೆ ಹಾಗೂ ಗಿಡಮೂಲಿಕೆ ಸಸ್ಯಗಳ ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.ಗ್ರಾ.ಪಂ. ಅಧ್ಯಕ್ಷೆ ಮಹಾಲಕ್ಷ್ಮೀ ಅಣ್ಣಪ್ಪ ಅಧ್ಯಕ್ಷತೆ ವಹಿಸಿದ್ದರು.

ತಾ.ಪಂ. ಸದಸ್ಯೆ ನಾಗರತ್ನಾ ದೇವರಾಜ್, ಉಪಾಧ್ಯಕ್ಷ ಶ್ರೀನಿವಾಸ ಗೌಡ, ವೈದ್ಯಾಧಿಕಾರಿ ಡಾ.ಪತಂಜಲಿ, ಡಾ.ಪುರುಷೋತ್ತಮ್, ಡಾ.ರಾಜೇ ಶ್ವರಿ, ಡಾ.ಗೀತಾ ಹಾಗೂ ಗ್ರಾ.ಪಂ. ಸದಸ್ಯರು ಹಾಜರಿದ್ದರು. ಶಾಲಾ-ಕಾಲೇಜು ವಿದ್ಯಾರ್ಥಿಗಳು ತಂಡೋಪತಂಡವಾಗಿ ಬಂದು ವಸ್ತುಪ್ರದರ್ಶನದ ಪ್ರಯೋಜನ ಪಡೆದುಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT