ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡಿನ ಚಕಮಕಿ: ಪೊಲೀಸ್ ಅಧಿಕಾರಿ ಸಾವು

Last Updated 7 ಜನವರಿ 2014, 10:57 IST
ಅಕ್ಷರ ಗಾತ್ರ

ಶ್ರೀನಗರ(ಪಿಟಿಐ): ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಗೆರಿಲ್ಲಾ ಗುಂಪಿನ ಮಧ್ಯೆ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಪೊಲೀಸ್ ಅಧಿಕಾರಿ ಮೃತಪಟ್ಟಿದ್ದು, ಮೂವರು ಪೊಲೀಸರು ಗಾಯಗೊಂಡಿದ್ದಾರೆ.

ಇಲ್ಲಿನ ಸೊಪೊರಿ ನಗರದಿಂದ 55 ಕಿ.ಮೀ. ದೂರದ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ಗುಂಡಿನ ಚಕಮಕಿ ನಡೆದಿದೆ.

ಘಟನೆಯಲ್ಲಿ ಎಎಸ್ಐ ಒಬ್ಬರು ಗಾಯಗೊಂಡಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಗಾಯಗೊಂಡ ಮೂವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT