ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡ್ಯ ಜಲವಿದ್ಯುತ್ ಯೋಜನೆಗೆ ಕೊಕ್?

Last Updated 13 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಉದ್ದೇಶಿತ ಗುಂಡ್ಯ ಜಲವಿದ್ಯುತ್ ಯೋಜನೆಯನ್ನು ರಾಜ್ಯ ಸರ್ಕಾರ ಕೈಬಿಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಗುಂಡ್ಯ ಯೋಜನೆಯಿಂದ ಪರಿಸರದ ಮೇಲೆ ಬೀರುವ ಪರಿಣಾಮದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ ರಚಿಸಿದ್ದ ಗಾಡ್ಗೀಳ್ ಸಮಿತಿ ಹಲವು ನಿರ್ಬಂಧಗಳನ್ನು ಹೇರಿದ್ದು, ಅದಕ್ಕೆ ಅನುಗುಣವಾಗಿ ಯೋಜನೆಯನ್ನು ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲದ ಕಾರಣ ಕೈಬಿಡುವುದೇ ಸೂಕ್ತ ಎಂಬ ಇಂಗಿತವನ್ನು ಸರ್ಕಾರ ವ್ಯಕ್ತಪಡಿಸಿದೆ.

ರಾಜ್ಯ ಸರ್ಕಾರ ವರದಿಯ ಬಗ್ಗೆ ತನ್ನ ನಿಲುವನ್ನು ಕೇಂದ್ರದ ಪರಿಸರ ಇಲಾಖೆಗೆ ಕಳುಹಿಸಿದ್ದು, ಅದರಲ್ಲಿ ಯೋಜನೆ ಕೈಬಿಡುವ ಇಂಗಿತವನ್ನು ವ್ಯಕ್ತಪಡಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT