ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್ ಚುನಾವಣೆ: ಶೇ 69ರಷ್ಟು ಮತದಾನ

Last Updated 17 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಅಹಮದಾಬಾದ್ (ಪಿಟಿಐ): ಗುಜರಾತ್ ವಿಧಾನಸಭೆಯ 95 ಕ್ಷೇತ್ರಗಳಿಗೆ ಸೋಮವಾರ ನಡೆದ ಎರಡನೇ ಮತ್ತು ಕೊನೆಯ ಹಂತದ ಚುನಾವಣೆಯಲ್ಲಿ ಜನ ಉತ್ಸಾಹದಿಂದ ಮತ ಚಲಾಯಿಸಿದ್ದು, ಶೇ 68- 69ರಷ್ಟು ಮತದಾನವಾಗಿದೆ. ಸುಮಾರು 1.98 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಅಹಮದಾಬಾದ್ ಜಿಲ್ಲೆಯಲ್ಲಿ ಅತಿಹೆಚ್ಚು ಅಂದರೆ ಶೇ 70.10ರಷ್ಟು  ಮತದಾನವಾಗಿದೆ.

ಪಂಚಮಹಲ್ ಜಿಲ್ಲೆಯ ಸಹೇರಾದ ಬಿಜೆಪಿ ಶಾಸಕ ಜೇತಾ ಭರ್ವಾಡ್ ಗುಂಡು ಹಾರಿಸಿದ ಘಟನೆ ಹೊರತುಪಡಿಸಿದರೆ ರಾಜ್ಯದಾದ್ಯಂತ ಮತದಾನ ಶಾಂತಿಯುತವಾಗಿತ್ತು. ಈ ಘಟನೆಯಲ್ಲಿ ನಾಲ್ಕು ಜನರಿಗೆ ಗಾಯಗಳಾಗಿದ್ದು, ಭರ್ವಾಡ್ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಹಾಲಿ ಮುಖ್ಯಮಂತ್ರಿ ನರೇಂದ್ರ ಮೋದಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಮುಖ್ಯಮಂತ್ರಿಯಾಗುವ ಆಕಾಂಕ್ಷೆ ಹೊಂದಿರುವ ಶಂಕರ್ ಸಿಂಗ್ ವಘೇಲಾ ಸೇರಿದಂತೆ 822 ಅಭ್ಯರ್ಥಿಗಳ ಹಣೆಬರಹ ನಿರ್ಧರಿಸಲು ಜನ ಮತ ಚಲಾಯಿಸಿದ್ದಾರೆ. ಇವರಲ್ಲಿ 49 ಜನ ಮಹಿಳಾ ಅಭ್ಯರ್ಥಿಗಳಿದ್ದಾರೆ.

ಚುನಾವಣೆ ನಡೆದ ಎಲ್ಲ 95 ಕ್ಷೇತ್ರಗಳಲ್ಲೂ ಬಿಜೆಪಿಯ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಕಾಂಗ್ರೆಸ್ 92 ಕ್ಷೇತ್ರಗಳಲ್ಲಿ, ಕೇಶು ಭಾಯ್ ಪಟೇಲ್ ಅವರ ಗುಜರಾತ್ ಪರಿವರ್ತನ ಪಕ್ಷ (ಜಿಪಿಪಿ) ಹಾಗೂ ಬಹುಜನ ಸಮಾಜ ಪಕ್ಷ ತಲಾ 84 ಅಭ್ಯರ್ಥಿಗಳನ್ನು ನಿಲ್ಲಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT