ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್: ಬಿಜೆಪಿ ಪ್ರಣಾಳಿಕೆ ಬಿಡುಗಡೆ

Last Updated 3 ಡಿಸೆಂಬರ್ 2012, 19:30 IST
ಅಕ್ಷರ ಗಾತ್ರ

ಅಹಮದಾಬಾದ್ (ಪಿಟಿಐ): ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಗುಜರಾತ್ ರಾಜ್ಯದ ಸಮಸ್ತ ವರ್ಗದ ಅಭಿವೃದ್ಧಿಯ ಭರವಸೆಗಳನ್ನು ಒಳಗೊಂಡ ಬಿಜೆಪಿ ಪ್ರಣಾಳಿಕೆಯನ್ನು ಮುಖ್ಯಮಂತ್ರಿ ನರೇಂದ್ರ ಮೊದಿ ಸೋಮವಾರ ಬಿಡುಗಡೆ ಮಾಡಿದ್ದು `ನವ ಮಧ್ಯಮ ವರ್ಗ' ಎಂಬ ಹೊಸ ವರ್ಗವನ್ನು ಸೃಷ್ಟಿಮಾಡಿ ಇವರಿಗೆ ಸಕಲ ಸೌಲಭ್ಯ ಒದಗಿಸುವುದಾಗಿ ತಿಳಿಸಿದ್ದಾರೆ.

ಕೃಷಿಕರ ಸಮಸ್ಯೆಗೆ ಪರಿಹಾರ ಒದಗಿಸುವುದರ ಜತೆಯಲ್ಲಿ ಗ್ರಾಮೀಣ ಹಾಗೂ ನಗರವಾಸಿಗಳ ವಸತಿ, ನೀರಿನ ಸಮಸ್ಯೆ ಪರಿಹರಿಸಲು ಆದ್ಯತೆ ನೀಡುವುದಾಗಿ ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ. ಬಡತನ ರೇಖೆಗಿಂತ ಸ್ವಲ್ಪ ಮೇಲೆ ಬಂದಿರುವ ಆದರೆ ಮಧ್ಯಮ ವರ್ಗಕ್ಕೆ ಸೇರದವರನ್ನು `ನವ ಮಧ್ಯಮ ವರ್ಗ'ಕ್ಕೆ ಸೇರಿಸಿರುವ ಮೋದಿ, ಇಂತಹ ವರ್ಗಕ್ಕೆ ಸೇರುವ ಎಲ್ಲರಿಗೂ ವಿವಿಧ ಯೋಜನೆಗಳ ಮೂಲಕ ಪ್ರಯೋಜನ ಒದಗಿಸಲಾಗುವುದು ಎಂದಿದ್ದಾರೆ.

ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ರಾಜ್ಯವು ಅಭಿವೃದ್ಧಿ ಕಾರ್ಯದಲ್ಲಿ ಗಣನೀಯ ಪ್ರಗತಿ ಸಾಧಿಸಿದ್ದರ ಪರಿಣಾಮ ಇಂತಹ `ನವ ಮಧ್ಯಮ ವರ್ಗ' ಉದಯವಾಗಿದ್ದು ಈ ವರ್ಗದ ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಅಗತ್ಯವಾಗಿದೆ ಎಂದರು. ಇದರ ಜತೆಯಲ್ಲಿ ಮುಂದಿನ ಐದು ವರ್ಷಗಳ ಅವಧಿಯಲ್ಲಿ ನಗರ ಹಾಗೂ ಗ್ರಾಮೀಣ ಬಡವರಿಗಾಗಿ 50 ಲಕ್ಷ ಮನೆಗಳನ್ನು ನಿರ್ಮಿಸುವುದಾಗಿ ಭರವಸೆ ನಿಡಿದ್ದಾರೆ. ಈ ಹಿಂದಿನ ಪ್ರಣಾಳಿಕೆಯಲ್ಲಿ 20 ಲಕ್ಷ ಮನೆಗಳ ಭರವಸೆ ನೀಡಲಾಗಿತ್ತು.

ಕಡಿಮೆ ವೆಚ್ಚದಲ್ಲಿ ಮನೆ ನಿರ್ಮಿಸಿಕೊಡುವ ಕಾಂಗ್ರೆಸ್ ಭರವಸೆಗೆ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇದೇ ಮಾದರಿಯ ಭರವಸೆಯನ್ನು ಬಿಜೆಪಿಯೂ ಈಗ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT