ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌ ಮಹಿಳೆ ಮೇಲೆ ಅಕ್ರಮ ನಿಗಾ

ತನಿಖಾ ಆಯೋಗ ರಚನೆ ಸಾಧ್ಯತೆ
Last Updated 19 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ನಿಕಟವರ್ತಿ ಅಮಿತ್‌ ಷಾ ಅವರ ಆಣತಿಯಂತೆ ಗುಜರಾತ್‌ನಲ್ಲಿ ಮಹಿಳೆಯೊಬ್ಬರ ಮೇಲೆ ಅಕ್ರಮವಾಗಿ ನಿಗಾ ಇರಿಸಿದ್ದ ಪ್ರಕರಣದ ತನಿಖೆಗೆ ಕೇಂದ್ರ ಸರ್ಕಾರ ಶೀಘ್ರದಲ್ಲೇ ತನಿಖಾ ಆಯೋಗ ರಚಿಸುವ ಸಾಧ್ಯತೆ ಇದೆ. 45 ಮಹಿಳಾ ಕಾರ್ಯಕರ್ತೆಯರು  ರಾಷ್ಟ್ರಪತಿಯವರನ್ನು ಭೇಟಿ ಮಾಡಿ ಪ್ರಕರಣದ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದರು.

ಆ ಸಂಬಂಧದ ಬೇಡಿಕೆಯ ಪತ್ರವನ್ನು ರಾಷ್ಟ್ರಪತಿಯವರು ಗೃಹ ಸಚಿವಾಲಯಕ್ಕೆ ರವಾನಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಸುಶೀಲ್‌ ಕುಮಾರ್‌ ಶಿಂಧೆ ಅವರು ಗುರುವಾರ ತಿಳಿಸಿದ್ದಾರೆ. ಶಿಂಧೆ ಅವರ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT