ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌ನಲ್ಲಿ ಚುನಾವಣೆ

Last Updated 3 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಸತತ ನಾಲ್ಕನೇ ಬಾರಿಗೆ ಅಧಿಕಾರದ ಗದ್ದುಗೆ ಏರಲು ಹವಣಿಸುತ್ತಿರುವ ನರೇಂದ್ರ ಮೋದಿ ಅವರ ಭವಿಷ್ಯ ನಿರ್ಧರಿಸಲಿರುವ ಗುಜರಾತ್ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಘೋಷಿಸಲಾಗಿದೆ.

ಮುಂದಿನ ಜನವರಿಯಲ್ಲಿ ಅಧಿಕಾರಾವಧಿ ಪೂರ್ಣಗೊಳ್ಳಲಿರುವ ಹಿಮಾಚಲ ಪ್ರದೇಶದ ವಿಧಾನಸಭೆಗೂ ಚುನಾವಣಾ ದಿನಾಂಕ ನಿಗದಿಪಡಿಸಲಾಗಿದೆ.

ಗುಜರಾತ್‌ನ ಒಟ್ಟು 182 ವಿಧಾನಸಭಾ ಸ್ಥಾನಗಳಿಗೆ ಡಿಸೆಂಬರ್ 13 ಮತ್ತು 17 ರಂದು ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ.

ಹಿಮಾಚಲ ಪ್ರದೇಶದ  ಒಟ್ಟು 68 ಸ್ಥಾನಗಳಿಗೆ ನವೆಂಬರ್ 4ರಂದು ಚುನಾವಣೆ ನಡೆಯಲಿರುವುದಾಗಿ ಮುಖ್ಯ ಚುನಾವಣಾ ಆಯುಕ್ತ ವಿ. ಎಸ್. ಸಂಪತ್ ಬುಧವಾರ ಘೋಷಿಸಿದ್ದಾರೆ.

`ಎರಡೂ ರಾಜ್ಯಗಳ ಮತ ಎಣಿಕೆ ಡಿ. 20ರಂದು ನಡೆಯಲಿದೆ. ಗುಜರಾತ್ ವಿಧಾನಸಭಾ ಚುನಾವಣೆಗಾಗಿ ನವೆಂಬರ್ 17ರಂದು ಹಾಗೂ ಹಿಮಾಚಲ ಪ್ರದೇಶದ ಚುನಾವಣೆಗಾಗಿ ಇದೇ 10ರಂದು ಅಧಿಸೂಚನೆ ಹೊರಡಿಸಲಾಗುವುದು~ ಎಂದರು.

`ದಿನಾಂಕ ಘೋಷಣೆಯಾದ ದಿನದಿಂದಲೇ ಚುನಾವಣಾ ನೀತಿ ಸಂಹಿತೆಗಳು ಜಾರಿಗೆ ಬರಲಿದ್ದು, ಚುನಾವಣೆಗೆ ಸಂಬಂಧಿಸಿದ ಎಲ್ಲಾ ಚಟುವಟಿಕೆಗಳನ್ನು ಆಯೋಗ ಸೂಕ್ಷ್ಮವಾಗಿ ಪರಿಶೀಲಿಸಲಿದೆ~ಎಂದು ತಿಳಿಸಿದರು.
ಅಂತಿಮ ದಿನಾಂಕ: ಗುಜರಾತ್‌ನಲ್ಲಿ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ನವೆಂಬರ್ 24 ಹಾಗೂ ಎರಡನೇ ಹಂತಕ್ಕೆ ನವೆಂಬರ್ 30 ಕೊನೆಯ ದಿನಾಂಕವಾಗಿದೆ. ನಾಮಪತ್ರ ಹಿಂತೆಗೆತಕ್ಕೆ ನ. 28 ಹಾಗೂ ಡಿ. 3 ಕೊನೆಯ ದಿನವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT