ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಣಮಟ್ಟದ ಶಿಕ್ಷಣ ಅಗತ್ಯ - ಮಾರೆಪ್ಪ

Last Updated 14 ಫೆಬ್ರುವರಿ 2011, 9:45 IST
ಅಕ್ಷರ ಗಾತ್ರ

ದೇವದುರ್ಗ: ಶಿಕ್ಷಣ ಕ್ಷೇತ್ರದಲ್ಲಿ ಖಾಸಗಿ ವಿದ್ಯಾಸಂಸ್ಥೆಗಳ ಪಾತ್ರ ಮುಖ್ಯವಾಗಿದ್ದು, ಪಾಲಕರ ನಿರೀಕ್ಷೆಯಂತೆ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ ಎಂದು ತಹಸೀಲ್ದಾರ್ ಮಾರೆಪ್ಪ ಅಭಿಪ್ರಾಯಪಟ್ಟರು.ಪಟ್ಟಣದ ಡಾನ್ ಬಾಸ್ಕೋ ವಿದ್ಯಾ ಸಂಸ್ಥೆಯಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಶಾಲೆಯ 8ನೇ ವಾರ್ಷಿಕೋತ್ಸವ ಮತ್ತು ಪಾಲಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಿಸೋಫ್ ಹನ್ರಿಡಿ. ಸುಜ್ ಡಿ.ಡಿ ಬಳ್ಳಾರಿ, ಪುರಸಭೆ ಅಧ್ಯಕ್ಷ ಲೋಕಮ್ಮ ಅಮರಣ್ಣಗೌಡ, ಶಿಕ್ಷಣ ಇಲಾಖೆಯ ಸಮನ್ವಯ ಅಧಿಕಾರಿ ಶಶಿಧರ್ ಬಿರಾದಾರ್, ವಕೀಲ ಎಸ್. ಬಸವರಾಜ, ಸಂಸ್ಥೆಯ ಮೇಲಧಿಕಾರಿ ದೀಪಾ ಪ್ರಾನ್ಸಿ, ಮುಖ್ಯಗುರು ಕೆ.ಸಿ. ಮತೀವ್, ಸಂಸ್ಥೆಯ ವ್ಯವಸ್ಥಾಪಕ ಜ್ವಾಲಿ ಜಾಕೋಬ್, ಸಂಸ್ಥೆಯ ಆಡಳಿತಾಧಿಕಾರಿ ಅಂಚಲಿ ಸಜಿ ಹಾಗೂ ಶಾಲೆಯ ಮಕ್ಕಳು ಮತ್ತು ಪಾಲಕರು ಭಾಗವಹಿಸಿದ್ದರು.ಶಾಲೆಯ ಪೂರ್ವ ಪ್ರಾಥಮಿಕ, ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT