ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುರುಪೀಠಗಳಿಗೆ ರೂ 12 ಕೋಟಿ ಅನುದಾನ

Last Updated 1 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಹಿಂದುಳಿದ ಸಮುದಾಯಗಳಿಗೆ ಸೇರಿದ ಮಠ-ಮಾನ್ಯಗಳು ನಡೆಸುವ ಶೈಕ್ಷಣಿಕ ಸಂಸ್ಥೆಗಳಿಗೆ ಅನುದಾನ ನೀಡುವ ವ್ಯವಸ್ಥೆ ಜಾರಿಯಲ್ಲಿದ್ದು, ಇದುವರೆಗೂ 14 ಸಂಸ್ಥೆಗಳಿಗೆ ಹಣಕಾಸಿನ ನೆರವು ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಎ.ನಾರಾಯಣಸ್ವಾಮಿ ಸೋಮವಾರ ಇಲ್ಲಿ ವಿವರಿಸಿದರು.

ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ನಡೆಸಿದ ಹಿಂದುಳಿದ ವರ್ಗಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಂತರ ಸಚಿವರು ಸುದ್ದಿಗಾರರ ಜತೆ ಮಾತನಾಡಿದರು.

ಬಜೆಟ್‌ಪೂರ್ವ ಸಭೆಗಳಲ್ಲಿ 45 ಸಮುದಾಯಗಳ ಗುರು ಪೀಠಗಳು ಅನುದಾನ ಬಯಸಿ ಮನವಿ ಸಲ್ಲಿಸಿದ್ದವು. ಈ ಕಾರಣಕ್ಕೆ ಬಜೆಟ್‌ನಲ್ಲಿ 25 ಕೋಟಿ ರೂಪಾಯಿ ತೆಗೆದಿರಿಸಲಾಗಿತ್ತು. ಅದರಲ್ಲಿ 14 ಗುರುಪೀಠಗಳು ಅಗತ್ಯ ದಾಖಲೆ ಸಲ್ಲಿಸಿ, 12 ಕೋಟಿ ರೂಪಾಯಿ ನೆರವು ಪಡೆದಿವೆ. ಉಳಿದ ಸಂಸ್ಥೆಗಳೂ ದಾಖಲೆ ಕೊಟ್ಟು ಅನುದಾನ ಪಡೆಯಬಹುದು ಎಂದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT