ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಲ್ಬರ್ಗಕ್ಕೆ ವಿಮಾನ ನಿಲ್ದಾಣ ವಿಳಂಬ

Last Updated 18 ಜನವರಿ 2011, 19:30 IST
ಅಕ್ಷರ ಗಾತ್ರ

ಸುಮಾರು 110 ಕೋಟಿ ವೆಚ್ಚದ ಬಹು ನಿರೀಕ್ಷಿತ ಗುಲ್ಬರ್ಗ ವಿಮಾನ ನಿಲ್ದಾಣ ಇನ್ನೂ ನೀರಿಕ್ಷೆಯಾಗಿಯೇ ಉಳಿದಿದೆ. ಬಿ.ಎಸ್. ಯಡಿಯೂರಪ್ಪ ಅವರು, ಮುಖ್ಯಮಂತ್ರಿಯಾಗಿ ಅಧಿಕಾರದ  ಸೂತ್ರ ಹಿಡಿದ ಕೆಲದಿನಗಳಲ್ಲಿಯೇ ಇಲ್ಲಿಗೆ ಆಗಮಿಸಿ 14-06-2008ರಂದು ಗುಲ್ಬರ್ಗ ವಿಮಾನ ನಿಲ್ದಾಣ ಸ್ಥಾಪನೆಗೆ ಅಡಿಗಲ್ಲು ಹಾಕಿದರು.

ಇನ್ನೆರಡು ವರ್ಷಗಳಲ್ಲಿ ವಿಮಾನ ನಿಲ್ದಾಣ ಆರಂಭಗೊಳ್ಳಲಿದೆ ಎಂದು ಘೋಷಿಸಿದ್ದರು. ಈ ಬೆಳವಣಿಗೆಯ ಹಿನ್ನೆಲೆಯಿಂದ ಉದ್ದೇಶಿತ ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದ ಭೂಮಿಯ ಬೆಲೆ ಒಂದೇ ಸಮನೆ ಗಗನಕ್ಕೇರಿತು. ಕೇಂದ್ರ ಸರ್ಕಾರದ ನಿಯಮಾವಳಿಗೆ ಅನುಗುಣವಾಗಿ ಯೋಜನೆಯ ಒಡಂಬಡಿಕೆಗೆ ರಾಜ್ಯ ಸರ್ಕಾರ ಸಹಿಹಾಕಿತು. ಇನ್ನೆನು ಕಾಮಗಾರಿ ಆರಂಭಗೊಳ್ಳಲಿದೆ ಎಂದು  ಪತ್ರಿಕೆಗಳಲ್ಲಿ ವರದಿಯಾಯಿತು. ಆದರೆ ಈ ಯೋಜನೆ ಇನ್ನೂ ಕನಸಾಗಿಯೇ ಉಳಿದಿರುವುದು ಅಚ್ಚರಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT