ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಲ್ಬರ್ಗದಲ್ಲಿ ಗರಿಷ್ಠ ಉಷ್ಣಾಂಶ

Last Updated 16 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಮಂಗಳವಾರ ಬೆಳಿಗ್ಗೆ 8.30ಕ್ಕೆ ಕೊನೆ  ಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಉತ್ತರ ಒಳನಾಡು, ಕರಾವಳಿಯಲ್ಲಿ ಒಣಹವೆ ಮುಂದುವರೆದಿದೆ. ಗುಲ್ಬರ್ಗದಲ್ಲಿ ಗರಿಷ್ಠ ಉಷ್ಣಾಂಶ 41.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. 
ಹುಲಿಯೂರುದುರ್ಗದಲ್ಲಿ 9 ಸೆಂ.ಮೀ.ಮಳೆಯಾಗಿದೆ.

ಬಸರಾಳು, ಮಳವಳ್ಳಿ 5, ಮಹಾದೇಶ್ವರ ಬೆಟ್ಟ, ಹೊನಕೆರೆ, ಮದ್ದೂರು, ಚಿಂತಾಮಣಿ 3, ಕೆ.ಆರ್.ನಗರ, ತಿ.ನರಸೀಪುರ, ಶ್ರೀರಂಗಪಟ್ಟಣ, ಮಂಡ್ಯ, ರಾಯಲ್ಪಾಡು, ಕೆ.ಜಿ.ಎಫ್, ನೆಲಮಂಗಲ, ಗೌರಿಬಿದನೂರು, ಕುಣಿಗಲ್ 2, ಯಳಂದೂರು, ಕೊಳ್ಳೆಗಾಲ, ಚನ್ನರಾಯಪಟ್ಟಣ, ಮಾಲೂರು, ಕನಕಪುರ, ಕೊರಟಗೆರೆಯಲ್ಲಿ ತಲಾ ಒಂದು ಸೆಂ.ಮೀ.ಮಳೆಯಾಗಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡಿನ ಜ್ಲ್ಲಿಲೆಗಳಲ್ಲಿ  ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT