ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೊಂದಲ ಪರಿಹರಿಸಿ

Last Updated 12 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕೆ.ಆರ್.ಇ.ಐ.ಎಸ್.)ದ ಮುಖಾಂತರ ರಾಜ್ಯ ಸರ್ಕಾರ ಮೊರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಿಗೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಗೊಂಡಿದೆ. ಅಂತಿಮ ಆಯ್ಕೆಪಟ್ಟಿಯ ನಿರೀಕ್ಷೆಯಲ್ಲಿ ಅಭ್ಯರ್ಥಿಗಳಿದ್ದಾರೆ.

ಸರ್ಕಾರದ ಬೇರೆ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಾವಿರಾರು ಮಂದಿ ಅಭ್ಯರ್ಥಿಗಳು ತಮ್ಮ ಮಾತೃ ಇಲಾಖೆಯ ಒಪ್ಪಿಗೆ ಪತ್ರ ಸಲ್ಲಿಸಿ ಪರೀಕ್ಷೆ ಬರೆದು ಆಯ್ಕೆಯಾಗಿದ್ದಾರೆ. ಆದರೆ ಈ ಹೊಸ ಹುದ್ದೆಗಳಿಗೆ ಸಂಬಂಧಿಸಿದಂತೆ  ಕೆಲವು ಗೊಂದಲಗಳಿವೆ. ಅವನ್ನು  ನಿವಾರಿಸಬೇಕಿದೆ.

ಹಾಲಿ ಹುದ್ದೆಯಲ್ಲಿ ಪಡೆಯುತ್ತಿದ್ದ ಪಿಂಚಣಿ, ಸರ್ಕಾರಿ ವಿಮಾ ಸೌಲಭ್ಯ, ಸಾಮಾನ್ಯ ಭವಿಷ್ಯ ನಿಧಿ ಇತ್ಯಾದಿಗಳನ್ನು ಹೊಸ ಹುದ್ದೆಯಲ್ಲೂ ಮುಂದುವರಿಸಲಾಗುತ್ತದೆಯೇ? ಹಿಂದಿನ ಸೇವಾವಧಿಯನ್ನು ಪರಿಗಣಿಸಲಾಗುತ್ತದೆಯೇ? ಹೊಸ ಪಿಂಚಣಿ ಸೌಲಭ್ಯವನ್ನು ಮುಂದುವರಿಸಲು ಅವಕಾಶವಿದೆಯೇ? ಪ್ರಾಂಶುಪಾಲರ ಹುದ್ದೆಗೆ ಬಡ್ತಿಗೆ ಅವಕಾಶವಿದೆಯೇ ಇತ್ಯಾದಿ   ಪ್ರಶ್ನೆಗಳಿಗೆ ಸಂಬಂಧಿಸಿದವರು ಉತ್ತರಿಸಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT