ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೊಬ್ಬರ ಕೊರತೆ: ರೈತರ ಪರದಾಟ

Last Updated 12 ಅಕ್ಟೋಬರ್ 2012, 5:55 IST
ಅಕ್ಷರ ಗಾತ್ರ

ಯಳಂದೂರು: ತಾಲ್ಲೂಕಿನಲ್ಲಿ ರೈತರು ರಸಗೊಬ್ಬರ ಕೊರತೆಯಿಂದ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ತಾಲ್ಲೂಕಿನ ಗೌಡಹಳ್ಳಿ ಗ್ರಾಮದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಗುರುವಾರ ಗೊಬ್ಬರ ಸಿಗದೆ ರೈತರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು.

`ಈಗಾಗಲೇ ಕಳೆದ ವಾರ ಬಿದ್ದ ಮಳೆ ಹಾಗೂ ಕಬಿನಿ ಕಾಲುವೆಯಲ್ಲಿ ಬಿಟ್ಟಿರುವ ನೀರನ್ನು ಬಳಸಿಕೊಂಡು ಈ ಭಾಗದಲ್ಲಿನ ರೈತರು ಬತ್ತವನ್ನು ನಾಟಿ ಮಾಡಿದ್ದಾರೆ. ಇದಕ್ಕೆ ಸರಿಯಾದ ಸಮಯಕ್ಕೆ ಗೊಬ್ಬರ ಕೊಡದಿದ್ದರೆ, ಫಸಲು ನಷ್ಟವಾಗುವ ಭೀತಿ ಇದೆ. ಆದರೆ ಅಧಿಕಾರಿಗಳ ಬೇಜವ್ದಾರಿಯಿಂದ ಅಗತ್ಯ ಪ್ರಮಾಣದ ಗೊಬ್ಬರ ದಾಸ್ತಾನಾಗಿಲ್ಲ.

ಈ ಸಹಕಾರ ಸಂಘದಲ್ಲಿ ಇಷ್ಟೆಲ್ಲಾ ಅವಾಂತರಗಳು ನಡೆಯುತ್ತಿದ್ದರೂ, ಕೃಷಿ ಅಧಿಕಾರಿಯೂ ಸೇರಿದಂತೆ ಯಾರೊಬ್ಬರೂ ಸ್ಥಳಕ್ಕೆ ಆಗಮಿಸಿಲ್ಲ. ಮುಂದಿನ ದಿನಗಳಲ್ಲಾದರೂ ಸರಾಗವಾಗಿ ರೈತರಿಗೆ ಗೊಬ್ಬರ ಸಿಗುವಂತೆ ಮಾಡಬೇಕು~ ಎಂದು ರೈತರಾದ ಪ್ರಭುಸ್ವಾಮಿ, ಮಲ್ಲೇಶ್, ಕೊಂಡೇಗೌಡ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT