ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋವಾ: ಅಕ್ರಮ ಗಣಿಗಾರಿಕೆ ತನಿಖೆ ಆರಂಭ

Last Updated 14 ಸೆಪ್ಟೆಂಬರ್ 2011, 19:00 IST
ಅಕ್ಷರ ಗಾತ್ರ

ಪಣಜಿ (ಐಎಎನ್‌ಎಸ್): ಗೋವಾದಲ್ಲಿನ ಅಕ್ರಮ ಗಣಿಗಾರಿಕೆ ಕುರಿತಂತೆ ನ್ಯಾಯಮೂರ್ತಿ ಎಂ.ಬಿ.ಷಾ ನೇತೃತ್ವದ ಆಯೋಗದ ಸದಸ್ಯರು ಬುಧವಾರ ತನಿಖೆ ಆರಂಭಿಸಿದರು. ರಾಜ್ಯದಲ್ಲಿ ಕನಿಷ್ಠ 100 ಕಂಪೆನಿಗಳು ಗಣಿಗಾರಿಕೆ ನಡೆಸುತ್ತಿದ್ದು ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ದೂರಗಳನ್ನು ಈ ಆಯೋಗದ ಸದಸ್ಯರು ಕೂಲಂಕಷವಾಗಿ ಪರಿಶೀಲಿಸಲಿದ್ದಾರೆ.

`ರಾಜ್ಯ ಸರ್ಕಾರದ ಅಧಿಕಾರಿಗಳು ಆಯೋಗಕ್ಕೆ ಎಲ್ಲ ಸಹಕಾರ ನೀಡಲಿದ್ದಾರೆ. ಈಗಾಗಲೇ ಆಯೋಗದ ಸದಸ್ಯರು ವಿವಿಧ ತಂಡಗಳನ್ನು ರಚಿಸಿಕೊಂಡಿದ್ದು, ಪ್ರತಿ ತಂಡವೂ 12 ಗಣಿಗಾರಿಕೆ ಪ್ರದೇಶಗಳ ಪರಿಶೀಲನೆ ನಡೆಸಲಿದೆ~ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಮೂರು ವಾರಗಳ ಕಾಲ ಗೋವಾ ರಾಜ್ಯದಾದ್ಯಂತ ಸಂಚರಿಸಲಿರುವ ಆಯೋಗದ ಸದಸ್ಯರು ಗಣಿಗಾರಿಕೆ ಕುರಿತಂತೆ ಎಲ್ಲ ಅಂಕಿ ಅಂಶಗಳು ಮತ್ತು ಸಂಪೂರ್ಣ ವಿವರಗಳನ್ನು ಕಲೆ ಹಾಕಲಿದ್ದಾರೆ. ಪ್ರಮುಖವಾಗಿ ಅಕ್ರಮ ಗಣಿಗಾರಿಕೆ ಮತ್ತು ಅರಣ್ಯ ಒತ್ತುವರಿ, ರಫ್ತು ವಿಷಯಗಳಿಗೆ ಸಂಬಂಧಿಸಿದಂತೆ ಅಗತ್ಯ ಮಾಹಿತಿಗಳನ್ನು ಸಂಗ್ರಹಿಸಲಿದ್ದಾರೆ.

ಈವರೆವಿಗೂ ರಾಜ್ಯದಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆಯ ಮೊತ್ತವನ್ನು 1,200 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಕಳೆದ ಹಣಕಾಸು ವರ್ಷವೊಂದರಲ್ಲೇ ರಾಜ್ಯದ ವಿವಿಧೆಡೆ 54 ದಶಲಕ್ಷ ಟನ್‌ಗಳಷ್ಟು ಅದಿರನ್ನು ಹೊರ ತೆಗೆಯಲಾಗಿದೆ. 

 ಪ್ರತಿಪಕ್ಷಗಳ ಆಪಾದನೆ: ಮುಖ್ಯಮಂತ್ರಿ ದಿಗಂಬರ ಕಾಮತ್ ಮತ್ತು ಅವರ ಸಂಪುಟದ  ಹಲವು ಸಚಿವರು ರಾಜ್ಯದಲ್ಲಿನ ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಗಳಾಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಮನೋಹರ ಪಾರಿಕ್ಕರ್ ಆಪಾದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT