ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಂಥಾಲಯ: ಅವಧಿ ವಿಸ್ತರಣೆ

Last Updated 19 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಗ್ರಂಥಾಲಯ ಇಲಾಖೆಯು 2011ನೇ ಸಾಲಿನಲ್ಲಿ ಪ್ರಕಟವಾದ ಪುಸ್ತಕಗಳನ್ನು ಏಕಗವಾಕ್ಷಿ, ರಾಜಾರಾಂ ಮೋಹನ್ ರಾಯ್ ಗ್ರಂಥಾಲಯ ಪ್ರತಿಷ್ಠಾನ ಯೋಜನೆಯಡಿ ಗ್ರಂಥಾಲಯಗಳಿಗೆ ಪೂರೈಸಲು ನೋಂದಣಿಯ ಅವಧಿಯನ್ನು ಫೆಬ್ರುವರಿ 15ರ ವರೆಗೆ ವಿಸ್ತರಿಸಿದೆ.

ಇಲಾಖೆಯು ಸೂಚಿಸಿದ ಅವಧಿಯಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಸಾಹಿತ್ಯ, ಕಲೆ, ವಿಜ್ಞಾನ, ಸ್ಪರ್ಧಾತ್ಮಕ, ಪಠ್ಯ, ಸಾಂದರ್ಭಿಕ, ಮಕ್ಕಳ ಸಾಹಿತ್ಯ, ವಿಚಾರ ಸಾಹಿತ್ಯ, ಸ್ಪರ್ಧಾತ್ಮಕ ಪರೀಕ್ಷೆ, ಇತ್ಯಾದಿ ವಿಷಯಗಳ ಕನ್ನಡ, ಇಂಗ್ಲಿಷ್ ಮತ್ತು ಇತರೆ ಭಾರತೀಯ ಭಾಷೆಯ ಗ್ರಂಥಗಳ ಆಯ್ಕೆಗಾಗಿ ನೋಂದಣಿ ಮಾಡಿಸಿಕೊಳ್ಳಬಹುದು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-2286 4990 ಹಾಗೂ 2286 7358 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT