ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಂಥಾಲಯ ಕಟ್ಟಡ ಕಾಮಗಾರಿ ಕಳಪೆ: ಆರೋಪ

Last Updated 10 ಅಕ್ಟೋಬರ್ 2011, 10:10 IST
ಅಕ್ಷರ ಗಾತ್ರ

ಜಾಲಹಳ್ಳಿ: ಪಟ್ಟಣದ ಅಂಬೇಡ್ಕರ್ ವೃತ್ತದ ಪಕ್ಕದಲ್ಲಿ ನಿರ್ಮಾಣ ಮಾಡುತ್ತಿರುವ ಗ್ರಂಥಾಲಯ ಕಟ್ಟಡ ಕಾಮಗಾರಿ ಕಳಪೆಯಾಗಿದೆ  ಎಂದು ಡಿವೈಎಫ್‌ಐ ಸಂಘಟನೆ ಆರೋಪಿಸಿದೆ.

ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಮಂಜೂರಾದ ಸುಮಾರು 50 ಲಕ್ಷ ರೂಪಾಯಿ ವೆಚ್ಚದ ಕಟ್ಟಡದ ನಿರ್ವಹಣೆಯನ್ನು ಆಂಧ್ರ ಮೂಲದ ಎಸಿಆರ್ ಕಂಪನಿ ಟೆಂಡರ್ ಮೂಲಕ ಗುತ್ತಿಗೆ ಪಡೆದಿದೆ. ಶಾಸಕ ಕೆ.ಶಿವನಗೌಡ ನಾಯಕ ಈ ಕಾಮಗಾರಿಗೆ ಅಡಿಗಲ್ಲು ಹಾಕಿದ ಸಂದರ್ಭದಲ್ಲಿಯೇ ಗುಣಮಟ್ಟದ ಕಾಮಗಾರಿಗೆ ಅಧಿಕಾರಿಗಳಿಗೆ ಸೂಚಿಸಿದ್ದರು.
 
ಆದರೆ ನಿರ್ಲಕ್ಷ್ಯದಿಂದ ಕಾಮಗಾರಿ ಕೈಗೊಳ್ಳುತ್ತಿರುವುದು ಕಂಡುಬಂದಿದ್ದು ಸರಿಯಾದ ಕಳಪೆ ಕಾಮಗಾರಿ ನಡೆಯಲು ಕಾರಣವಾಗಿದೆ ಎಂದು ಸಂಘಟನೆ ಮುಖಂಡರಾದ ಶೈಲೇಶಕುಮಾರ ಘನಾತೆ, ಬಸವರಾಜ, ಜಯಪ್ಪ ಪೂಜಾರಿ ಆರೋಪಿಸಿದ್ದಾರೆ.

ಕೂಡಲೇ ಮೇಲಧಿಕಾರಿಗಳು ಇತ್ತ ಕಡೆ ಗಮನಹರಿಸಿ ಗುಣಮಟ್ಟದ ಕಾಮಗಾರಿಗೆ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT