ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಹಾಮ್ ಡಿಲೆ ನಿಧನ

Last Updated 6 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಲಂಡನ್ (ಐಎಎನ್‌ಎಸ್): ಇಂಗ್ಲೆಂಡ್ ಕ್ರಿಕೆಟ್ ತಂಡ 1981ರಲ್ಲಿ ಆ್ಯಷಸ್ ಸರಣಿ ಜಯಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ವೇಗಿ ಗ್ರಹಾಮ್ ರಾಯ್ ಡಿಲೆ (52) ಅವರು ಬುಧವಾರ ನಿಧನರಾದರು.  ಗ್ರಹಾಮ್ ಅವರಿಗೆ ಒಟ್ಟು ನಾಲ್ಕು ಜನ ಮಕ್ಕಳಿದ್ದಾರೆ.

1979ರ ನವೆಂಬರ್‌ನಲ್ಲಿ ಸಿಡ್ನಿಯಲ್ಲಿ ನಡೆದ ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಡಿಲೆ ಅಂತರರಾಷ್ಟ್ರೀಯ ಕ್ರಿಕೆಟ್ ಲೋಕಕ್ಕೆ ಪದಾರ್ಪಣೆ ಮಾಡಿದ್ದರು. ಇದೇ ವರ್ಷದ ಡಿಸೆಂಬರ್‌ನಲ್ಲಿ ಪರ್ತ್‌ನಲ್ಲಿ ಮೊದಲ ಟೆಸ್ಟ್ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಆಡಿದ್ದರು. 41 ಟೆಸ್ಟ್  ಆಡಿರುವ ಇಂಗ್ಲೆಂಡ್‌ನ ಮಾಜಿ ವೇಗಿ ಒಟ್ಟು 138 ವಿಕೆಟ್ ಪಡೆದಿದ್ದಾರೆ. 36 ಏಕದಿನ ಪಂದ್ಯಗಳನ್ನಾಡಿ 48 ವಿಕೆಟ್ ಕಬಳಿಸಿದ್ದಾರೆ.

1981ರ ಆಷ್ಯಸ್ ಟೆಸ್ಟ್ ಸರಣಿಯ ಮೂರನೇ ಟೆಸ್ಟ್‌ನಲ್ಲಿ ಎಂಟನೇ ವಿಕೆಟ್‌ಗೆ ಸರ್ ಇಯಾನ್ ಬಾಥಮ್ ಜೊತೆ ಗೂಡಿ 117 ರನ್‌ಗಳ ಜೊತೆಯಾಟ ಆಡಿದ್ದರು. ಈ ಆಟ ಪಂದ್ಯಕ್ಕೆ ರೋಚಕ ತಿರುವು ನೀಡಿತ್ತು ಎಂದು `ದ ಡೇಲಿ ಟೆಲಿಗ್ರಾಫಿ~ ಪತ್ರಿಕೆ ಆ ದಿನಗಳನ್ನು ಮೆಲುಕು ಹಾಕಿದೆ. ಗಾಯದ ಸಮಸ್ಯೆಯಿಂದ ಬಳಲಿದ ಡಿಲೆ 1992ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಜೀವನಕ್ಕೆ ವಿದಾಯ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT