ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾ.ಪಂ.ಗೆ ಬೀಗ ಜಡಿಯಲು ಯತ್ನ

Last Updated 19 ಫೆಬ್ರುವರಿ 2011, 4:40 IST
ಅಕ್ಷರ ಗಾತ್ರ

ಸಂತೇಮರಹಳ್ಳಿ: ಇಲ್ಲಿನ ಗ್ರಾಮ ಪಂಚಾಯಿತಿಯಲ್ಲಿ ನಡೆದಿರುವ ಅವ್ಯವಹಾರ ಖಂಡಿಸಿ ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತರು ಕಚೇರಿಗೆ ಬೀಗ ಜಡಿಯಲು ಮುಂದಾದರು.
ಸ್ಥಳಕ್ಕೆ ಆಗಮಿಸಿದ ಜಿ.ಪಂ. ಸಹಾಯಕ ಕಾರ್ಯದರ್ಶಿ ಪಿ.ಜಿ. ವೇಣುಗೋಪಾಲ್  ಪ್ರತಿಭಟ ನಾಕಾರ ರೊಂದಿಗೆ ಮಾತುಕತೆ ನಡೆಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿ ಕಚೇರಿಗೆ ಸರಿಯಾಗಿ ಬರುತ್ತಿಲ್ಲ. ಸಾರ್ವಜನಿಕರ ಸಮಸ್ಯೆ ಕೇಳುತ್ತಿಲ್ಲ. ಗ್ರಾಮದಲ್ಲಿ ಕುಡಿಯುವ ನೀರು, ಚರಂಡಿ, ಬೀದಿದೀಪದ ಸಮಸ್ಯೆಯಿದ್ದು, ಗಮನಹರಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.

ಸಮಸ್ಯೆ ಗಮನಕ್ಕೆ ತರಲು ಸದಸ್ಯರು ಭೇಟಿ ನೀಡುತ್ತಿಲ್ಲ. 2.70 ಲಕ್ಷ ರೂ ದುರುಪಯೋಗವಾಗಿದೆ. ಶೌಚಾಲಯಗಳಿಗೆ ಅನಧಿಕೃತವಾಗಿ ಬಿಲ್ ಪಾವತಿಸಲಾಗಿದೆ. ಸಾಕಷ್ಟು ಅವ್ಯವಹಾರ ನಡೆದಿದ್ದು, ಕೂಡಲೇ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ವೇಣುಗೋಪಾಲ್ ಮಾತನಾಡಿ, ‘ಅವ್ಯವಹಾರದ ಬಗ್ಗೆ ತನಿಖೆ ನಡೆಸಿ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳ ಲಾಗುವುದು’ ಎಂದು ಹೇಳಿದರು.

ಜಿ.ಪಂ. ಸದಸ್ಯ ಬಿ.ಪಿ. ಪುಟ್ಟಬುದ್ಧಿ, ಮುಖಂಡ ಸಿದ್ದಲಿಂಗಸ್ವಾಮಿ, ತಾ.ಪಂ. ಮಾಜಿ ಸದಸ್ಯ ಡಿ.ಪಿ. ಪ್ರಕಾಶ್, ಗ್ರಾ.ಪಂ. ಮಾಜಿ ಅಧ್ಯಕ್ಷ ಕಿಟ್ಟಪ್ಪ, ಚಿನ್ನಸ್ವಾಮಿ, ನಾಗರಾಜಪ್ಪ, ಡಿ.ಪಿ. ರಾಜು, ಸೋಮಣ್ಣ ಹಾಜರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT