ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾ.ಪಂ.ನಲ್ಲಿ ಲಂಚ ಇಲ್ಲದೆ ಕೆಲಸ ಆಗಲ್ವಂತೆ

Last Updated 7 ಸೆಪ್ಟೆಂಬರ್ 2011, 9:20 IST
ಅಕ್ಷರ ಗಾತ್ರ

ಪಿರಿಯಾಪಟ್ಟಣ: `ಗ್ರಾಮ ಪಂಚಾಯಿತಿಗಳಲ್ಲಿ ಲಂಚವಿಲ್ಲದೆ ಕೆಲಸವಾಗುವುದಿಲ್ಲ ಎನ್ನುವ ಮಾತು ನಿಜವೆ~-ಈ ರೀತಿಯ ಹಲವು ಪ್ರಶ್ನೆಗಳನ್ನು   ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪಂಚಾಯಿತಿ ಸದಸ್ಯರು ಮತ್ತು ಅಧಿಕಾರಿಗಳನ್ನು ಸೋಮವಾರ ಇಕ್ಕಟ್ಟಿಗೆ ಸಿಲುಕಿಸಿದರು.

ತಾಲ್ಲೂಕಿನ ಬೆಟ್ಟದಪುರ ಗ್ರಾಮ ಪಂಚಾಯಿತಿಯಲ್ಲಿ ಕಾಲೇಜು ವಿದ್ಯಾರ್ಥಿಗಳೊಂದಿಗೆ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳಿಗೆ ಚುರುಕು ಮುಟ್ಟಿಸಲಾಯಿತು.

ವಿದ್ಯಾರ್ಥಿಗಳು ಕೇಳಿದ ಪ್ರೆಶ್ನೆಗಳಿಗೆ ಜನಪ್ರತಿನಿಧಿಗಳು ಲವಲವಿಕೆಯಿಂದ ಉತ್ತರ ನೀಡಿದರಾದರೂ ಉದ್ಯೋಗ ಖಾತ್ರಿ ಯೋಜನೆ ಇನ್ನಿತರ ಯೋಜನೆ ಗಳಲ್ಲಿ ನಡೆಯುವ ಅಕ್ರಮಗಳ ಕುರಿತು ವಿದ್ಯಾರ್ಥಿಗಳ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು  ತಡಬಡಾಯಿಸಿದರು.

ಈ ಸಂದರ್ಭದಲ್ಲಿ ಸಂವಾದ ಮಹತ್ವ ಕುರಿತು ಬೆಟ್ಟದಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಿ.ಸಿ.ಮಹಾದೇವ್ ಮಾತನಾಡಿ ಗ್ರಾಮ ಪಂಚಾಯಿತಿಯ ಆಡಳಿತದಲ್ಲಿ ಜನರು ನೇರವಾಗಿ ಪಾಲ್ಗೊಳ್ಳುವ ಸಾಮಾನ್ಯಸಭೆ ಹೊರತು ಪಡಿಸಿ ಅನೇಕ ಅವಕಾಶಗಳಿವೆ. ಆದರೆ ಸಾರ್ವಜನಿಕರು ಈ ಬಗ್ಗೆ ನಿರ್ಲಕ್ಷ್ಯ ಮತ್ತು ಅರಿವಿನ ಕೊರತೆಯಿಂದ ಭಾಗವಹಿಸಲು ಆಸಕ್ತಿ ತೋರುತ್ತಿಲ್ಲ. ಇದರಿಂದ ಪಂಚಾಯಿತಿಗಳಲ್ಲಿ ಕಾರ್ಯ ಚಟುವಟಿಕೆಗಳ  ಬಗ್ಗೆ ಸಾರ್ವಜನಿಕರಿಗೆ ತಿಳಿವಳಿಕೆ ಇಲ್ಲದಂತಾಗಿದೆ. ಯೋಜನೆಗಳ ಮಾಹಿತಿ ದೊರಕದೆ ಸೌಲಭ್ಯಗಳಿಂದ ವಂಚಿತರಾಗುವ ಸಾಧ್ಯತೆಗಳು ಹೆಚ್ಚಾಗುತ್ತವೆ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಾನಕಿಲೋಕೇಶ್ ಮಾತನಾಡಿ ಸರ್ಕಾರ ದಲ್ಲಿ ಸ್ಥಳೀಯ ಸಮಸ್ಯೆಗಳಿಗೆ ಆದ್ಯತೆ ನೀಡುವ ಕೆಲಸ ಗ್ರಾಮ ಪಂಚಾಯಿತಿ ಮತ್ತು ಪಟ್ಟಣ ಪಂಚಾಯಿತಿ, ಪುರಸಭೆ ಗಳಂತಹ ಸ್ಥಳೀಯ ಆಡಳಿತಗಳಿಂದ ಮಾತ್ರ ಸಾಧ್ಯ. ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು   ಗ್ರಾಮೀ ಣಾಭಿವೃದ್ಧಿಯತ್ತ ಜನಪ್ರತಿನಿಧಿಗಳು ಚಿಂತನೆ ನಡೆಸಬೇಕು. ಇವರ ಆಡಳಿತವನ್ನು ದುರುಪಯೋಗವನ್ನು ಪ್ರಶ್ನಿಸುವ ಮನೋಭಾವವನ್ನು  ಪ್ರತಿಯೊಬ್ಬರು ಹೊಂದಿದ್ದಾಗ ಮಾತ್ರ ಪಾರದರ್ಶಕ ಆಡಳಿತ ನೀಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಸಭೆಯಲ್ಲಿ ಹಾಜರಿದ್ದ ಪ್ರಾಂಶುಪಾಲ ಸತ್ಯನಾರಾಯಣ ಮಾತನಾಡಿ, ವಿದ್ಯಾರ್ಥಿಗಳಿಗೆ ನೈಜ ಸಭೆಯ ಪರಿಚಯದೊಂದಿಗೆ ಪ್ರಾಯೋಗಿಕ ಅಧ್ಯಯನಕ್ಕೆ ಅನುಕೂಲವಾಗಿದ್ದು ಗ್ರಾಮೀಣ ವಿದ್ಯಾರ್ಥಿಗಳಿಗೆ ಈ ಸಂವಾದ ಅಧ್ಯಯನಕ್ಕೆ ಹೆಚ್ಚಿನ ಉಪಯೋಗಕಾರಿಯಾಗಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಟ್ಟಣದ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ 50 ಮಂದಿ ವಿದ್ಯಾರ್ಥಿಗಳು, ಉಪನ್ಯಾಸಕ ಕೆ.ಪಿ.ಮಂಜು, ಗ್ರಾ.ಪಂ.ಉಪಾಧ್ಯಕ್ಷ ರಮೇಶ್, ಸದಸ್ಯರಾದ ತೋಟಪ್ಪಶೆಟ್ಟಿ, ಶಂಕರ್, ಚನ್ನಬಸಪ್ಪ, ಮಧುಸೂದನ್ ಸೇರಿದಂತೆ ಮತ್ತಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT