ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮ, ನಗರ ತಾರತಮ್ಯ ಬೇಡ

Last Updated 19 ಅಕ್ಟೋಬರ್ 2011, 9:35 IST
ಅಕ್ಷರ ಗಾತ್ರ

ಗೌರಿಬಿದನೂರು: ಗ್ರಾಮೀಣ ಪ್ರದೇಶಗಳಲ್ಲಿ ಅತ್ಯುತ್ತಮ ರೀತಿಯ ಶಿಕ್ಷಣ ಸೌಲಭ್ಯ ದೊರೆತ್ಲ್ಲಲಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಯಾರಿಗೂ ಸರಿಸಾಟಿಯಿಲ್ಲದಂತೆ ಯಶಸ್ಸು ಸಾಧಿಸುತ್ತಾರೆ ಎಂದು ಕೇಂದ್ರ ಕಂಪೆನಿ ವ್ಯವಹಾರಗಳ ಸಚಿವ ವೀರಪ್ಪ ಮೊಯಿಲಿ ತಿಳಿಸಿದರು.

ಪಟ್ಟಣದ ಕೋಟೆ ಪ್ರೌಢಶಾಲೆಯಲ್ಲಿ ಕಿಸಾನ್ ಸಭಾ ಟ್ರಸ್ಟ್ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿರುವ ವಿಶೇಷ ಬೋಧನಾ ಶಿಬಿರಕ್ಕೆ ಮಂಗಳವಾರ ಭೇಟಿ ನೀಡಿದ ಅವರು, `ನಗರ ಪ್ರದೇಶ ಮತ್ತು ಗ್ರಾಮೀಣ ಪ್ರದೇಶ ಎಂಬ ತಾರತಮ್ಯ ವಿದ್ಯಾರ್ಥಿಗಳಲ್ಲಿ ಮೂಡಬಾರದು.
ಉತ್ತಮ ಗುಣಮಟ್ಟದ ಶಿಕ್ಷಣ ನೀಡಿದ್ದಲ್ಲಿ, ಇಬ್ಬರೂ ಸಮಾನ ಸಾಧನೆ ಮಾಡಲು ಸಾಧ್ಯವಾಗುತ್ತದೆ~ ಎಂದರು.

`ವಿದ್ಯಾರ್ಥಿಗಳು ನಸುಕಿನ 4 ಗಂಟೆಗೆ ಎದ್ದು ವಿದ್ಯಾಭ್ಯಾಸ ಮಾಡಬೇಕು. ಉತ್ತಮ ಗ್ರಂಥ ಓದಬೇಕು. ಟಿವಿ, ಮೊಬೈಲ್ ಫೋನ್‌ಗಳಿಂದ ದೂರವಿದ್ದು, ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು. ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಹೆಚ್ಚಿನ ಆದ್ಯತೆ ನೀಡಬೇಕು~ ಎಂದು ಅವರು ತಿಳಿಸಿದರು.

ಬಾಗೇಪಲ್ಲಿ ಶಾಸಕ ಸಂಪಂಗಿ, ಬಿಇಒ ಶಮೀನ್‌ತಾಜ್, ಮುಖ್ಯ ಶಿಕ್ಷಕ ಫಾರೂಕ್ ಅಹಮದ್, ಸಮನ್ವಯಾಧಿಕಾರಿ ಬೈಯಪ್ಪರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಕೆ.ಸತೀಶ್, ಪ್ರಧಾನ ಕಾರ್ಯದರ್ಶಿ ವೆಂಕಟರವಣ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ರಾಧಮ್ಮ, ಶಿಕ್ಷಕರಾದ ಲಕ್ಷ್ಮಿನರಸೇಗೌಡ, ಶಮೀರ್‌ಪಾಷಾ, ಗೋಪಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT