ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮ ಸ್ವರಾಜ್ಯ - ಪ್ರಸ್ತುತ

Last Updated 3 ಅಕ್ಟೋಬರ್ 2012, 5:10 IST
ಅಕ್ಷರ ಗಾತ್ರ

ಕೊಪ್ಪಳ: ಮಹಾತ್ಮ ಗಾಂಧಿ ಪ್ರತಿಪಾದಿಸಿದ ಗ್ರಾಮ ಸ್ವರಾಜ್ಯದ ಪರಿಕಲ್ಪನೆ ಇಂದಿಗೂ ಪ್ರಸ್ತುತ. ಭಾರತದಂತಹ ಅಭಿವೃದ್ಧಿಶೀಲ ದೇಶಗಳು ಸ್ವಾವಲಂಬನೆಯಾಗಲು ಇದು ಪ್ರೇರಕವಾಗಿದೆ ಎಂದು ಸ್ವಾತಂತ್ರ್ಯ ಹೋರಾಟಗಾರ ಶರಣಬಸವರಾಜ ಬಿಸರಳ್ಳಿ ಹೇಳಿದರು.

ವಾರ್ತಾ ಇಲಾಖೆಯು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದೊಂದಿಗೆ ಗಾಂಧಿ ಜಯಂತಿ ಅಂಗವಾಗಿ ಮಂಗಳವಾರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಏರ್ಪಡಿಸಿದ್ದ `ಮಹಾತ್ಮ ಗಾಂಧೀಜಿಯವರ ವಿಚಾರ ಧಾರೆಗಳು~ ವಿಚಾರ ಸಂಕಿರಣದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

ಪ್ರತಿಯೊಂದಕ್ಕೂ ವಿದೇಶವನ್ನೇ ಅವಲಂಬಿಸುವ ಕೆಟ್ಟ ಸಂಸ್ಕೃತಿಗೆ ಗಾಂಧೀಜಿ ಅಂದಿನ ದಿನಗಳಲ್ಲೇ ವಿರೋಧ ವ್ಯಕ್ತಪಡಿಸಿದ್ದರು. ದೇಶೀಯ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡುವುದರ ಮೂಲಕ ಗ್ರಾಮೀಣ ಜನರ ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸುವ ಮತ್ತು ಗುಡಿ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಗ್ರಾಮ ಸ್ವರಾಜ್ಯದ ಕಲ್ಪನೆಗೆ ಅವರು ನಾಂದಿ ಹಾಡಿದ್ದರು ಎಂದರು. ಇದಕ್ಕೂ ಮುನ್ನ ಮಹಾತ್ಮ ಗಾಂಧೀಜಿಯವರ ಭಾವಚಿತ್ರ ನಮನ ಸಲ್ಲಿಸಿ ಮಾತನಾಡಿದ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು, ಗಾಂಧಿ ಅವರ ತತ್ತ್ವ, ಸಿದ್ಧಾಂತಗಳ ಪೈಕಿ ಕೆಲವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಆದರ್ಶ ವ್ಯಕ್ತಿಯಾಗಿ ರೂಪುಗೊಳ್ಳಲು ಸಾಧ್ಯ ಎಂದರು.

ಜಿಲ್ಲಾ ವಾರ್ತಾಧಿಕಾರಿ ತುಕಾರಾಂ ರಾವ್ ಬಿ.ವಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಸ್.ರಾಜಾರಾಂ ದೇಶಭಕ್ತಿ ಗೀತೆ ಹಾಡಿದರು. ಅಂಬಿಕಾ ಮತ್ತು ಸಂಗಡಿಗರು `ರಘುಪತಿ ರಾಘವ ರಾಜಾರಾಂ~ ಗೀತೆಯನ್ನು ಹಾಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಸೌಭಾಗ್ಯ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ಮುಖ್ಯ ಯೋಜನಾಧಿಕಾರಿ ಟಿ.ಪಿ.ದಂಡಿಗದಾಸರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಎಚ್.ವೀರಣ್ಣ ಉಪಸ್ಥಿತರಿದ್ದರು. ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ನಿರೂಪಿಸಿ, ವಂದಿಸಿದರು.

ಮುದ್ದಾಬಳ್ಳಿ: ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಪಂಪಣ್ಣ ನಾಗರಳ್ಳಿ, ಗ್ರಾಮ ಪಂಚಾಯಿತಿ ಸದಸ್ಯ ಗೋವಿಂದ ರೆಡ್ಡಿ ಮಾದಿನೂರ, ಪ್ರಕಾಶ ಹಾಲವರ್ತಿ, ಎಸ್‌ಡಿಎಂಸಿ ಸದಸ್ಯರಾದ ಶರಣೇಗೌಡ ಪಾಟೀಲ, ವಾಸಪ್ಪ ಮುದ್ದಿ, ರಹಿಮಾನಸಾಬ ಕಾಯಿಗಡ್ಡಿ ಪಾಲ್ಗೊಂಡಿದ್ದರು.

ಚಂದ್ರಶೇಖರ ಹತ್ತಿಕಟಿಗಿ ಸ್ವಾಗತಿಸಿದರು. ಶಿಕ್ಷಕಿ ಕವಿತಾ ನಿರೂಪಿಸಿದರು. ದೀಪಾ ವಂದಿಸಿದರು. ನಂತರ ಮಕ್ಕಳಿಂದ ಶ್ರಮದಾನ ನಡೆಯಿತು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT