ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮೀಣ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಅಗತ್ಯ: ಶಾಸಕ

Last Updated 2 ಸೆಪ್ಟೆಂಬರ್ 2013, 8:28 IST
ಅಕ್ಷರ ಗಾತ್ರ

ಯಳಂದೂರು: ಗ್ರಾಮೀಣ ಭಾಗದಲ್ಲಿ ಆರೋಗ್ಯವಂತ ದೃಢಕಾಯ ಕ್ರೀಡಾಪಟುಗಳು ಅಧಿಕ ಸಂಖ್ಯೆಯಲ್ಲಿ ಲಭ್ಯವಾಗುತ್ತಾರೆ. ಆದರೆ, ಇವರಿಗೆ ಪ್ರೋತ್ಸಾಹ ನೀಡಿ ಗುರುತಿಸುವ ಕೆಲಸವನ್ನು ಸಂಬಂಧಪಟ್ಟ ಇಲಾಖೆ ನಿರ್ವಹಿಸಬೇಕು ಎಂದು ಶಾಸಕ ಎಸ್. ಜಯಣ್ಣ ಕರೆ ನೀಡಿದರು.

ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಹಾಗೂ ಲಯನ್ಸ್ ಶಾಲೆಯ ಸಹಕಾರದೊಂದಿಗೆ ಈಚೆಗೆ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಗ್ರಾಮೀಮ ಪ್ರತಿಭೆಗಳಿಗೂ ರಾಷ್ಟ್ರೀಯ, ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸುವ ಅರ್ಹತೆ ಇದ್ದರೂ ಸೂಕ್ತ ತರಬೇತಿ ಇಲ್ಲದೆ ಅದು ಸಾಧ್ಯವಾಗಿಲ್ಲ. ಈ ಕೆಲಸವನ್ನು ತಳಮಟ್ಟದಲ್ಲೇ ಮಾಡಬೇಕಾದ ಜವಾಬ್ದಾರಿ ಸಂಬಂಧಪಟ್ಟ ಇಲಾಖೆಗೆ ಇದೆ. ಇದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಾದ ಅನಿವಾರ್ಯತೆ ಪ್ರಸಕ್ತ ದಿನಗಳಲ್ಲಿ ಹೆಚ್ಚಾಗಿದೆ ಎಂದರು.

ಇದಕ್ಕೂ ಮುಂಚೆ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಮಹಾದೇವಪ್ಪ ಪಾರಿವಾಳ ಹಾರಿಬಿಡುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ತಹಶೀಲ್ದಾರ್ ಶಿವರಾಮು, ಸಿಪಿಐ ಕೀರ್ತಿಕುಮಾರ್ ಕ್ರೀಡಾಜ್ಯೋತಿ ಬೆಳಗಿಸಿದರು. ವಿವಿಧ ಶಾಲೆಗಳ ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನ ನಡೆಸಿದರು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಜಿಲ್ಲಾ ಪಂಚಾಯಿತಿ ಸದಸ್ಯ ಸಿದ್ದರಾಜು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಗಂಗಾಮಣಿರೇವಣ್ಣ, ಸದಸ್ಯರಾದ ಮಹೇಶ್‌ಕುಮಾರ್, ರಾಮಚಂದ್ರ, ಉಮಾವತಿಸಿದ್ದರಾಜು, ಕೆ.ಪಿ. ಶಿವಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಮಂಜುನಾಥ್, ದೈಹಿಕ ಶಿಕ್ಷಣ ಪರಿವೀಕ್ಷಕ ಮಹಾದೇವ್, ಬಿಆರ್‌ಸಿ ರಾಜಪ್ಪ ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT