ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮೀಣ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಅಗತ್ಯ

Last Updated 6 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಕನಕಪುರ: ಗ್ರಾಮೀಣ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಿದಾಗ  ನಗರ ಪ್ರದೇಶದ ಮಕ್ಕಳಿಗಿಂತ ಉತ್ತಮ ಸಾಧನೆ ಮಾಡುತ್ತಾರೆಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ರವಿ.ಹೇಳಿದರು.

ಪಟ್ಟಣದ ಶಿಕ್ಷಕರ ಭವನ ರಸ್ತೆಯಲ್ಲಿರುವ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಶಿಕ್ಷಣ ಪೌಂಡೇಶನ್ ಹಮ್ಮಿಕೊಂಡಿದ್ದ ವರ್ಕ್‌ಬುಕ್ ವಿತರಣಾ ಸಮಾರಂಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ ಗ್ರಾಮೀಣ ಪ್ರದೇಶದ ಮಕ್ಕಳ ್ಲಕೌಶಲ್ಯವನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದರು.

 ರೋಟರಿ ಮಾಜಿ ಅಧ್ಯಕ್ಷ ದೇವರಾಜ್‌ಅರಸು ಮಾತನಾಡಿ 2002ರಲ್ಲಿ ರೋಟರಿ ಸಂಸ್ಥೆಯು ಶಿಕ್ಷಣ ಫೌಂಡೇಷನ್‌ನ್ನು ತಾಲ್ಲೂಕಿಗೆ ಉತ್ತಮ ಕೆಲಸಗಳನ್ನು ಮಾಡುತ್ತಿದೆ. ತಾಲ್ಲೂಕಿನ ಸಾಕಷ್ಟು ಶಾಲೆಗಳ ಬಡವಿದ್ಯಾರ್ಥಿಗಳಿಗೆ ಉಚಿತ ನೋಟ್‌ಪುಸ್ತಕ, ಪೆನ್‌ಡ್ರೈವ್, ಲ್ಯಾಪ್‌ಟಾಪ್ ನೀಡಿದ್ದಲ್ಲದೆ ಪ್ರತಿ ಶಾಲೆಯಲ್ಲಿ ಆಯ್ದ ವಿದ್ಯಾರ್ಥಿಗಳನ್ನು ದೆಹಲಿ ಶೈಕ್ಷಣಿಕ ಪ್ರವಾಶವನ್ನು ಪ್ರತಿವರ್ಷ ನಿರಂತರವಾಗಿ ನಡೆಸುತ್ತಾ ಬಂದಿದೆ ಎಂದರು. 

 ಜಿಲ್ಲಾ ಸಂಯೋಜಕ ಶಿವಕುಮಾರ್, ಮುಖ್ಯೋಪಾಧ್ಯಯ ಎಚ್.ವಿ. ಅಪ್ಪಾಜಿ, ಕ್ಷೇತ್ರ ಶಿಕ್ಷಣ ಸಮನ್ವಯ ಅಧಿಕಾರಿ ಸ್ವರೂಪ, ಪ್ರಸನ್ನಕುಮಾರ್, ಸತೀಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT