ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಕಂಪ್ಯೂಟರ್ ತರಬೇತಿ

Last Updated 5 ಅಕ್ಟೋಬರ್ 2012, 18:30 IST
ಅಕ್ಷರ ಗಾತ್ರ

ಬೆಂಗಳೂರು:  ರಾಜ್ಯದ ಗ್ರಾಮೀಣ ಪ್ರದೇಶದ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ 7ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಮೂರು ದಿನಗಳ ಅಲ್ಪಾವಧಿಯ ಉಚಿತ ಕಂಪ್ಯೂಟರ್ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಬಿ.ಎನ್.ಬಚ್ಚೇಗೌಡ ಹೇಳಿದರು.

ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್‌ಗಳ ಸಂಯುಕ್ತ ಆಶ್ರಯದಲ್ಲಿ ನಗರದ ಕೆ.ಆರ್.ಪುರದ ಬಿದರಹಳ್ಳಿಯಲ್ಲಿರುವ ಈಸ್ಟ್ ಪಾಯಿಂಟ್ ತಾಂತ್ರಿಕ ಕಾಲೇಜಿನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ `ವಿದ್ಯಾರ್ಥಿಗಳ ಅಂತರ್ಜಾಲ ಪ್ರಪಂಚ- 2012~ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

`ನಗರ ಪ್ರದೇಶದಲ್ಲಿನ ಮಕ್ಕಳಿಗೆ ಅವರ ಪೋಷಕರು ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ಪ್ರಾಥಮಿಕ ಹಂತದಲ್ಲಿಯೇ ಕಂಪ್ಯೂಟರ್ ಕಲಿಸುತ್ತಾರೆ. ಆದರೆ, ಗ್ರಾಮೀಣ ಪ್ರದೇಶದಲ್ಲಿರುವ ಮಕ್ಕಳು ಈ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಇದನ್ನು ಮನಗಂಡಿರುವ ಸರ್ಕಾರ ಗ್ರಾಮೀಣ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ತರಬೇತಿ ನೀಡಲು ಮುಂದಾಗಿದೆ~ ಎಂದು ಅವರು ತಿಳಿಸಿದರು.

`ವಿದ್ಯಾರ್ಥಿಗಳ ಅಂತರ್ಜಾಲ ಪ್ರಪಂಚ  ಕಾರ್ಯಕ್ರಮಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸುಮಾರು 15 ಸಾವಿರ ಕೋಟಿ ವೆಚ್ಚ ಮಾಡುತ್ತಿವೆ ಎಂದರು. ಈ ಅಂತರ್ಜಾಲ ಯೋಜನೆ ದಶಕಗಳ ಹಿಂದೆಯೇ ಆರಂಭವಾಗಬೇಕಿತ್ತು~ ಎಂದು ಅವರು ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಎಚ್.ವಿ.ವೆಂಕಟಪ್ಪ, ಈಸ್ಟ್ ಪಾಯಿಂಟ್ ತಾಂತ್ರಿಕ ಕಾಲೇಜಿನ ಅಧ್ಯಕ್ಷ ವೆಂಕಟಪತಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಮೋದ್‌ಗೌಡ, ಹೊಸಕೋಟೆ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜೇಗೌಡ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT