ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮೀಣ ಶಿಕ್ಷಕನಿಗೆ ರಾಷ್ಟ್ರೀಯ ಪ್ರಶಸ್ತಿ

Last Updated 3 ಮೇ 2012, 6:30 IST
ಅಕ್ಷರ ಗಾತ್ರ

ನಾಯಕನಹಟ್ಟಿ: ಇಲ್ಲಿನ ವಿದ್ಯಾವಿಕಾಸ ಶಾಲೆಯ ಶಿಕ್ಷಕ ಕೆ.ಎಂ. ಶಿವಸ್ವಾಮಿ ಅವರಿಗೆ ಸಾಮಾಜಿಕ ರಂಗಗಳಲ್ಲಿ ವೈಯಕ್ತಿಕ ಅತ್ಯುತ್ತಮ ಸಾಧನೆಗಾಗಿ ನವದೆಹಲಿಯ ರಾಷ್ಟ್ರೀಯ ಶಿಕ್ಷಣ ಆರೋಗ್ಯ ಅಭಿವೃದ್ಧಿ ಸಂಸ್ಥೆ ರಾಷ್ಟ್ರಮಟ್ಟದ ಪ್ರಶಸ್ತಿ ನೀಡಿ ಗೌರವಿಸಿತು.

ಏ. 22ರಂದು ನವದೆಹಲಿಯಲ್ಲಿ ಕೇಂದ್ರ ಸಚಿವ ಹರೀಶ್ ರಾವತ್ ಪ್ರಶಸ್ತಿ ಪ್ರದಾನ ಮಾಡಿದರು. ನವದೆಹಲಿಯ ರಾಷ್ಟ್ರೀಯ ಶಿಕ್ಷಣ ಆರೋಗ್ಯ ಅಭಿವೃದ್ಧಿ ಸಂಸ್ಥೆ ಸಾಮಾಜಿಕ ಹಾಗೂ ವೈಯಕ್ತಿಕವಾಗಿ ಗಣನೀಯ ಸೇವೆ ಸಲ್ಲಿಸಿದವರಿಗೆ ರಾಷ್ಟ್ರೀಯ ಪ್ರಶಸ್ತಿ ನೀಡುತ್ತಾ ಬಂದಿದೆ. ಈ ಬಾರಿ 30ನೇ ವಿಶೇಷ ಸಮ್ಮೇಳನದಲ್ಲಿ ದೇಶದ ನಾನಾ ಭಾಗಗಳ 32 ಜನರಿಗೆ ಈ ಪ್ರಶಸ್ತಿ ನೀಡಲಾಗಿದೆ.

ದೆಹಲಿಯ ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆಯ ಅಧೀನದ ವಿಜ್ಞಾನ ಪ್ರಸಾರ ಸಂಸ್ಥೆಯು ಕೆ.ಎಂ. ಶಿವಸ್ವಾಮಿ ಅವರನ್ನು ಪ್ರಶಸ್ತಿಗೆ ಶಿಫಾರಸು ಮಾಡಿತ್ತು.ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿಬಿಐ ಮಾಜಿ ನಿರ್ದೇಶಕ ಜೋಗಿಂದರ್ ಸಿಂಗ್, ಸಿಯಾಚಿನ್ ಪ್ರದೇಶದ ಹೈಕಮಿಷನರ್ ವೇವನ್ ವಿಲಿಯಮ್ಸ, ಎಐಸಿಸಿ ಮಾಜಿ ನಿರ್ದೇಶಕ ವೇದಪ್ರಕಾಶ್, ಶಿಕ್ಷಣ ಹಾಗೂ ಆರೋಗ್ಯ ಸಂಸ್ಥೆಯ ಕಾರ್ಯದರ್ಶಿ ಮಿಶ್ರಾ ಹಾಜರಿದ್ದರು.

 ಶಿಕ್ಷಕ ಶಿವಸ್ವಾಮಿ 2011ರಲ್ಲಿ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ಶಿಕ್ಷಕರ ಸಮ್ಮೇಳನದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಮೂರು ಬಾರಿ ರಾಷ್ಟ್ರೀಯ ವಿಜ್ಞಾನ ಶಿಕ್ಷಕರ ಸಮ್ಮೇಳನಕ್ಕೆ ರಾಜ್ಯ ಪ್ರತಿನಿಧಿಸಿದ್ದರು.

ಅವರ ಮಾರ್ಗದರ್ಶನದಲ್ಲಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಯ 18 ವಿದ್ಯಾರ್ಥಿಗಳು ಲಕ್ನೋ, ಅಹಮದಬಾದ್, ಕನ್ಯಾಕುಮಾರಿ ಮೊದಲಾದೆಡೆ ನಡೆದ ರಾಷ್ಟ್ರೀಯ ಶಿಬಿರಗಳಲ್ಲಿ ಭಾಗವಹಿಸಿದ್ದಾರೆ.
ರಾಷ್ಟ್ರಮಟ್ಟದ ಪ್ರಶಸ್ತಿ ಗಳಿಸಿದ ಶಿವಸ್ವಾಮಿ ಅವರನ್ನು ಚಿತ್ರದುರ್ಗ ವಿಜ್ಞಾನ ಕೇಂದ್ರದ ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಉಪಾಧ್ಯಕ್ಷ ಶಂಕರಪ್ಪ, ದಾಸೇಗೌಡ ಮತ್ತು ಶಾಲಾ ಸಿಬ್ಬಂದಿ ಅಭಿನಂದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT