ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಹಕರ ಹಕ್ಕು ರಕ್ಷಣೆಗೆ ಸಲಹೆ:ನ್ಯಾ.ರಾಘವೇಂದ್ರ

Last Updated 11 ಫೆಬ್ರುವರಿ 2012, 10:25 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ಗ್ರಾಹಕರಿಗೆ ಆಗುವ ಶೋಷಣೆಗಳ ವಿರುದ್ಧ ವಿದ್ಯಾರ್ಥಿಗಳು ಜಾಗೃತರಾಗಿರಬೇಕೆಂದು ಜೆ.ಎಂ.    ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶ ಆರ್. ರಾಘವೇಂದ್ರ ಶುಕ್ರವಾರ ಕರೆ ನೀಡಿದರು.

ತಾಲ್ಲೂಕಿನ ತೆರಕಣಾಂಬಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗ್ರಾಹಕರ ಕ್ಲಬ್ ಉದ್ಘಾಟಿಸಿ ಮಾತನಾಡಿದರು. ಇಂದಿನ ಸನ್ನಿವೇಶದಲ್ಲಿ ವ್ಯಾಪಾರದಲ್ಲಿ ಕಂಡು ಬರುವ ಮೋಸ, ವಂಚನೆ ಅರಿಯಬೇಕು. ಗ್ರಾಹಕರು ತಮ್ಮ ಹಕ್ಕುಗಳ ಬಗ್ಗೆ ಸ್ಪಷ್ಟವಾಗಿ ತಿಳಿದುಕೊಂಡರೆ ಮಾತ್ರ ಅದರ ವಿರುದ್ಧ ಹೋರಾಡಲು ಸಾಧ್ಯ ಎಂದರು.

ವಿದ್ಯಾರ್ಥಿಗಳು ಕಾನೂನಿನ ಬಗ್ಗೆಯೂ ತಿಳಿದುಕೊಳ್ಳಬೇಕು. ಮತ್ತು ಅದನ್ನು ಜನರಿಗೆ ತಿಳಿಸಿ ಜಾಗರೂಕರಾಗುವಂತೆ ಮಾಡಲು ಶ್ರಮವಹಿಸಬೇಕೆಂದು ಸಲಹೆ ನೀಡಿದರು. ವಿದ್ಯಾರ್ಥಿಗಳು ಗ್ರಾಹಕರ ಕ್ಲಬ್ ಮೂಲಕ ಅನೇಕ ಜಾಗೃತಿ ಕಾರ್ಯಕ್ರಮ ಹಾಗೂ ಜಾಥಾ ಹಮ್ಮಿಕೊಳ್ಳಬೇಕೆಂದು ಸಲಹೆ ನೀಡಿದರು.

ಸಹಾಯಕ ಸರ್ಕಾರಿ ಅಭಿಯೋಜಕ ಬಿ.ಪಿ. ಮಂಜುನಾಥ್, ಗ್ರಾಹಕರ ಹಕ್ಕುಗಳ ಸಂರಕ್ಷಣಾ ಕಾಯಿದೆಯ ಬಗ್ಗೆ ವಕೀಲ ಎಚ್.ವಿ. ರವಿಕಾಂತ್ ಉಪನ್ಯಾಸ ನೀಡಿದರು. ಮಕ್ಕಳ ಹಕ್ಕುಗಳ ಬಗ್ಗೆ ಹಿರಿಯ ವಕೀಲ ಜಿ.ಬಿ. ನಂಜಪ್ಪ ಮಾತನಾಡಿದರು. ಪ್ರಾಚಾರ್ಯ ರವೀಂದ್ರಕುಮಾರ್ ಪಿಳ್ಳೈ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಪನ್ಯಾಸಕರುಗಳಾದ ಮಹೇಶ್, ಬೈರವೇಶ್, ಗಿರೀಶ್, ನಾಗೇಂದ್ರ  ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT