ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಟಗಳಿಗೆ ಬಲಿಯಾದ ಯುವಜನ

Last Updated 21 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: `ದುಶ್ಚಟಗಳಿಗೆ ಒಳಗಾಗುತ್ತಿರುವ ಯುವ ಜನತೆ ದೀರ್ಘಕಾಲೀನ ರೋಗಗಳಿಗೆ ತುತ್ತಾಗುತ್ತಿದ್ದಾರೆ ಎಂದು  ಶ್ರೀರಾಮ ಆಸ್ಪತ್ರೆ ವೈದ್ಯ ಡಾ.ಎಚ್.ಜಿ.ವಿಜಯಕುಮಾರ್ ವಿಷಾದಿಸಿದರು.

ಅತಾಲ್ಲೂಕಿನ ಜಿಂಕೆಬಚ್ಚಹಳ್ಳಿ ಗ್ರಾಮದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ವತಿಯಿಂದ ಆಯೋಜಿಸಿದ್ದ ಏಳು ದಿನಗಳ ವಿಶೇಷ ಇದರ ಬಗ್ಗೆ ಸ್ವಲ್ಪ ಎಚ್ಚರ ತಪ್ಪಿದರು ಭವಿಷ್ಯದ ಬದುಕು ಅಂದಕಾರದಲ್ಲಿ ಮುಳಗಲಿದೆ ಎಂದುಾಷ್ಟ್ರೀಯ ಸೇವಾ ಯೋಜನ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

`ಯುವಕರು ಜೀವನದ ಬಗ್ಗೆ ಸ್ವಲ್ಪ ಎಚ್ಚರ ತಪ್ಪಿದರು ಭವಿಷ್ಯದ ಬದುಕು ಅಂಧಕಾರದಲ್ಲಿ ಮುಳಗಲಿದೆ. ಗ್ರಾಮೀಣ ಭಾಗದಲ್ಲಿ ಇಂದು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಿಲ್ಲ. ತಮ್ಮ ಮನೆಗಳ ಸುತ್ತ ಕನಿಷ್ಠ ಸ್ವಚ್ಛತೆ ಕಾಪಾಡಿಕೊಳ್ಳುವ ಕಡೆಗೆ ಆದ್ಯತೆ ನೀಡಬೇಕು. ಯುವ ಜನತೆ ಮುಖ್ಯವಾಗಿ ಏಡ್ಸ್‌ನಂತಹ ಭಯಾನಕ ರೋಗಗಳ ಬಗ್ಗೆ ಎಚ್ಚರ ವಹಿಸಬೇಕು. ಎನ್‌ಎಸ್‌ಎಸ್ ಶಿಬಿರಗಳು ಕೇವಲ ಶ್ರಮದಾನಕ್ಕಷ್ಟೇ ಸೀಮಿತವಾಗದೆ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ಕಾರ್ಯಕ್ರಮಗಳು ನಡೆಯಬೇಕು~ ಎಂದು ಹೇಳಿದರು.

ಶಿಬಿರದಲ್ಲಿ ರಾಜ್ಯ ರೈತ ಸಂಘದ ವಿದ್ಯಾರ್ಥಿ ಘಟಕದ ಅಧ್ಯಕ್ಷ ವಸಂತ್‌ಕುಮಾರ್, ಉಪನ್ಯಾಸಕ ಬಿ.ಎಸ್.ಪ್ರಸನ್ನ, ಎನ್‌ಎಸ್‌ಎಸ್ ಶಿಬಿರಾಧಿಕಾರಿ ಟಿ.ಆರ್.ಶ್ರೀರಾಮಗೌಡ ಮುಂತಾದವರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT