ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಪಟ್ಟಣ: ಆತ್ಮಹತ್ಯೆಗೆ ಯತ್ನ, ಆಸ್ಪತ್ರೆಗೆ ದಾಖಲು

Last Updated 6 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಚನ್ನಪಟ್ಟಣ: ಅಪರಿಚಿತ ವ್ಯಕ್ತಿಯೊಬ್ಬ ವಿಷಕುಡಿದು ತನ್ನ ಕೈಗಳನ್ನು ಬ್ಲೇಡ್‌ನಿಂದ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆಯೊಂದು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಸಂತೆಮೊಗಳ್ಳಿ ತಂಗುದಾಣದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಯತಿಸಿರುವ ವ್ಯಕ್ತಿಯ ಹೆಸರು, ವಿಳಾಸ ತಿಳಿದುಬಂದಿಲ್ಲ. ಆತನ ವಯಸ್ಸು 30ರಿಂದ 35ವರ್ಷ. ಭಾನುವಾರ ಮಧ್ಯಾಹ್ನ ತಂಗುದಾಣದಲ್ಲಿ ವಿಶ್ರಮಿಸಿಕೊಳ್ಳಲು ಹೋದವರಿಗೆ, ಈ ವ್ಯಕ್ತಿಯ ಬಾಯಲ್ಲಿ ನೊರೆ ತುಂಬಿಕೊಂಡು ಕೈಯಲ್ಲಿ ರಕ್ತ ಸೋರುತ್ತಿದ್ದದ್ದನ್ನು ಕಂಡಿದ್ದಾರೆ.

ತೀವ್ರ ಅಸ್ವಸ್ಥನಾದ ಈತನನ್ನು ಜನರು ಜನರು ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಕಾಲದಲ್ಲಿ ಚಿಕಿತ್ಸೆ ನೀಡಿದ ವೈದ್ಯರು ಹೆಚ್ಚಿನ ಚಿಕಿತ್ಸೆ ಬೆಂಗಳೂರಿನ ವಿಕ್ಟೋರಿಯ ಆಸ್ಪತೆಗೆ  ಕಳುಹಿಸಿದ್ದಾರೆಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ಯತ್ನಿಸಿದವನ ಜೇಬಿನಲ್ಲಿ ಡೈರಿ ದೊರೆತಿದ್ದು, ಅದರಲ್ಲಿ ಹಲಗೂರು ಭಾಗದ ಕೆಲವರ ಹೆಸರುಗಳಿವೆ. ಹೀಗಾಗಿ ಆತ ಮಳವಳ್ಳಿ ತಾಲ್ಲೂಕಿನವರೆಂದು ಅಂದಾಜಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.  ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೂಜು ಅಡ್ಡೆ ಮೇಲೆ ದಾಳಿ
ಚನ್ನಪಟ್ಟಣ:
ತಾಲ್ಲೂಕಿನ ನೇರಳೂರು ಗ್ರಾಮದಲ್ಲಿ ಜೂಜು ಆಡುತ್ತಿದ್ದ ಗುಂಪಿನ ಮೇಲೆ ದಾಳಿ ನಡೆಸಿದ ಪೊಲೀಸರು ಪಣಕ್ಕಿಟ್ಟಿದ್ದ 1290ರೂ ವಶಪಡಿಸಿಕೊಂಡು 6ಮಂದಿ ಜೂಜು ಕೋರರನ್ನು ಬಂಧಿಸಿದ್ದಾರೆ.
ಖಚಿತ ಮಾಹಿತಿ ಪಡೆದ ಡಿವೈಎಸ್‌ಪಿ ಟಿ. ಸಿದ್ದಪ್ಪ ಗ್ರಾಮಾಂತರ, ವೃತ್ತ ನಿರೀಕ್ಷಕ ಸಿ.ಸಂಪತ್‌ಕುಮಾರ್ ಮಾರ್ಗದರ್ಶನದಲ್ಲಿ ಪಿಎಸ್‌ಐ ಜಯರಾಮ್ ಮತ್ತಿತರರು ದಾಳಿನಡೆಸಿದ್ದಾರೆ.

ಬಂಧಿತರನ್ನು ಶಿವಣ್ಣ, ಶಿವಲಿಂಗಸ್ವಾಮಿ, ಸತೀಶ್, ದೇವರಾಜ್ ಪ್ರಕಾಶ್ ಎಂದು ಗುರುತಿಸಲಾಗಿದ್ದು ನ್ಯಾಯಾಂಗ ಬಂಧಿಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT