ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚರ್ಚ್ ದಾಳಿ: ಮೃತರ ಸಂಖ್ಯೆ 83ಕ್ಕೆ

Last Updated 23 ಸೆಪ್ಟೆಂಬರ್ 2013, 19:36 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌ (ಪಿಟಿಐ): ಪೆಶಾವರದ ಚರ್ಚ್ ಮೇಲೆ ತಾಲಿಬಾನ್‌ ಉಗ್ರರು ನಡೆಸಿರುವ ಬಾಂಬ್‌ ದಾಳಿ ಖಂಡಿಸಿ ಕ್ರಿಶ್ಚಿಯನ್ನರು ಹಾಗೂ ವಿವಿಧ ಸಂಘಟನೆಗಳ ಸದಸ್ಯರು ಸೋಮವಾರ ಪಾಕಿಸ್ತಾನ ದಾದ್ಯಂತ ಪ್ರತಿಭಟನೆ ನಡೆಸಿದರು.

ಈ ದುಷ್ಕೃತ್ಯ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಮಡಿದವರ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು.

ಈ ಮಧ್ಯೆ, ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 83ಕ್ಕೆ ಏರಿದೆ.  ತೆಹ್ರಿಕ್‌-ಇ ತಾಲಿಬಾನ್‌ ಪಾಕಿಸ್ತಾನ್‌ ಸಂಘಟನೆಯ ಅಂಗಸಂಸ್ಥೆಯಾದ ಜಂದುಲ್ಲಾಹ್‌ ಸಂಘಟನೆಯು ದಾಳಿ ಹೊಣೆ ಹೊತ್ತಿದ್ದು, ಅಮೆರಿಕ ನಡೆಸುತ್ತಿರುವ ಡ್ರೋನ್‌ ದಾಳಿಗೆ ಪ್ರತೀಕಾರವಾಗಿ ಸ್ಫೋಟ ನಡೆಸಲಾಗಿದೆ ಎಂದು ಹೇಳಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT