ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಲವಾದಿ ಮಹಾಸಭಾ ಸಮಾವೇಶ 10ರಂದು

Last Updated 1 ಜೂನ್ 2011, 8:05 IST
ಅಕ್ಷರ ಗಾತ್ರ

ಬಾಗಲಕೋಟೆ: `ಚಲವಾದಿ ಮಹಾಸಭಾದ ರಾಜ್ಯಮಟ್ಟದ ಸಮಾವೇಶ ಹಾಗೂ ಮಹಾಸಭಾದ ಕಟ್ಟಡದ ಭೂಮಿಪೂಜೆ ಜೂನ್ 10ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ~ ಎಂದು ಮಹಾಸಭಾ ಜಿಲ್ಲಾಧ್ಯಕ್ಷ ಅಶೋಕ ನಾರಾಯಣಿ ತಿಳಿಸಿದ್ದಾರೆ.

`ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಸಮಾವೇಶವನ್ನು ಉದ್ಘಾಟಿಸಲಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಟ್ಟಡಕ್ಕೆ ಅಡಿಗಲ್ಲು ಹಾಕಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಿದ್ದಾರೆ~ ಎಂದು ಅವರು ಹೇಳಿದ್ದಾರೆ.

`ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕಿ ಮೋಟಮ್ಮ ಅಧ್ಯಕ್ಷತೆ ವಹಿಸುವರು. ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಗೋವಿಂದ ಕಾರಜೋಳ ಸೇರಿದಂತೆ ಅನೇಕ ಗಣ್ಯರು ಭಾಗವಹಿಸುವರು~ ಎಂದು ಅವರು ವಿವರಿಸಿದರು.

`ಬಾಗಲಕೊಟೆ ಜಿಲ್ಲೆಯಿಂದ 20 ಸಾವಿರ ಜನರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು~ ಎಂದು ಮಹಾಸಭಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಡಿ. ಹುನ್ನೂರ, ಗೌರವ ಅಧ್ಯಕ್ಷ ಬಸವರಾಜ ಚಲವಾದಿ, ಜಿಲ್ಲಾ ಖಜಾಂಚಿ ಎನ್.ಬಿ. ಗಸ್ತಿ, ತಾಲ್ಲೂಕು ಅಧ್ಯಕ್ಷ ಗ್ಯಾನಪ್ಪ ಚಲವಾದಿ, ಜಿಲ್ಲಾ ಖಜಾಂಚಿ ಎನ್.ಬಿ. ಗಸ್ತಿ, ವಿವೇಕಾನಂದ ಗರಸಂಗಿ ಮತ್ತಿತರರು ಪ್ರಕಟಣೆಯಲ್ಲಿ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT