ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಳಿಗಾಲದ ಅಧಿವೇಶನ ಸಿದ್ಧತೆಗೆ ಸೂಚನೆ

Last Updated 26 ಸೆಪ್ಟೆಂಬರ್ 2013, 8:52 IST
ಅಕ್ಷರ ಗಾತ್ರ

ಬೆಳಗಾವಿ: ನವೆಂಬರ್‌ ತಿಂಗಳಿನಲ್ಲಿ ಚಳಿಗಾಲದ ಅಧಿವೇಶನ ನಡೆಸುವ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ ಅವರು ಸುವರ್ಣ ವಿಧಾನಸೌಧದಲ್ಲಿ ಬುಧವಾರ ಪೂರ್ವಭಾವಿ ಸಭೆ ನಡೆಸಿದರು.

ಚಳಿಗಾಲದ ಅಧಿವೇಶನ ಸುಗಮ­ವಾಗಿ ನಡೆಸಲು ಅನುಕೂಲವಾಗು­ವಂತೆ ವಿಧಾನಮಂಡಲದ ಸಚಿವಾಲಯ ಹಾಗೂ ಜಿಲ್ಲಾ ಆಡಳಿತ ಪರಸ್ಪರ ಸಮನ್ವಯದಿಂದ ಈಗಿನಿಂದಲೇ ಸಿದ್ಧತಾ ಕಾರ್ಯಗಳನ್ನು ಪ್ರಾರಂಭಿಸಬೇಕು. ಅಧಿವೇಶನಕ್ಕೆ ಆಗಮಿಸುವ ಶಾಸಕರು, ವಿಧಾನ ಪರಿಷತ್ ಸದಸ್ಯರು, ಅಧಿಕಾರಿಗಳು, ಗಣ್ಯರು ಹಾಗೂ ಇತರರಿಗೆ ಸೂಕ್ತವಾದ ವಸತಿ, ಊಟ ಹಾಗೂ ಸಾರಿಗೆ ವ್ಯವಸ್ಥೆ ಮಾಡಬೇಕು ಎಂದು ಸಭಾಪತಿಗಳು ಸೂಚಿಸಿದರು. 

ಅಧಿವೇಶನದ ಸಂದರ್ಭದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ, ನಗರವನ್ನು ಸ್ವಚ್ಛ ಹಾಗೂ ಸುಂದರ­ವಾ­ಗಿ­ಡುವ ಕುರಿತು, ಅಧಿವೇಶನ ಕಾಲಕ್ಕೆ ನಿರಂತರ ವಿದ್ಯುತ್ ಪೂರೈಸುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. 

ಜಿಲ್ಲಾಧಿಕಾರಿ ಎನ್.ಜಯರಾಂ, ವಿಧಾನ ಪರಿಷತ್ ಕಾರ್ಯದರ್ಶಿ ಶ್ರೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಚಂದ್ರಗುಪ್ತ, ಮಹಾನಗರ ಪಾಲಿಕೆ ಆಯುಕ್ತೆ ಪ್ರಿಯಾಂಕಾ ಪ್ರಾನ್ಸಿಸ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿ ಸೂಕ್ತ ಸಲಹೆ ಸೂಚನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT